

ರಾಣೆಬೆನ್ನೂರ: ಮಾನಸಿಕ ಕಾಯಿಲೆಯಿಂದ ವ್ಯಕ್ತಿಯೊಬ್ಬ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡ ಘಟನೆ ತಾಲೂಕಿನ ಕೂಲಿ ಗ್ರಾಮದಲ್ಲಿ ನಡೆದಿದೆ.
ಅಮಾನುಲ್ಲಾ ರಾಜೇಸಾಬ ಮೆಣಸಿನಹಾಳ (34) ಮೃತ ವ್ಯಕ್ತಿ.
ಈತ ಮಾನಸಿಕ ಕಾಯಿಲೆಯಿಂದ ಬಳಲುತ್ತಿದ್ದ. ಇದರಿಂದ ಬೇಸತ್ತು ಮನೆಯಲ್ಲಿಯೆ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾನೆ. ಈ ಕುರಿತು ಹಲಗೇರಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.