

ಪ್ರಮುಖ ಮುಖ್ಯಾಂಶಗಳು
ನವೆಂಬರ್‌ನಲ್ಲಿ ಯೋಜನೆ ಪೂರ್ಣಗೊಳ್ಳಬೇಕಿತ್ತು. ನಿರಂತರ ಮಳೆ ಹಾಗೂ ಕೆಲ ತಾಂತ್ರಿಕ ಕಾರಣಗಳಿಂದ ಕಾಮಗಾರಿ ವಿಳಂಬ ಆಗಿದ್ದು ನಿಜ. ಯೋಜನೆ ಪೂರ್ಣಗೊಳ್ಳಲು ಕಾಮಗಾರಿಯ ವೇಗ ಹೆಚ್ಚಿಸಲು ಶಾಸಕರು, ಜಿಲ್ಲಾಧಿಕಾರಿಯವರು ಹಾಗೂ ಇಲಾಖೆಯ ಹಿರಿಯ ಅಧಿಕಾರಿಗಳು ಈಗಾಗಲೇ ಗುತ್ತಿಗೆದಾರರಿಗೆ ಸೂಚಿಸಿದ್ದಾರೆ. ಕೆಲವೇ ತಿಂಗಳಲ್ಲಿ ಯೋಜನೆ ಪೂರ್ಣಗೊಳ್ಳುವ ವಿಶ್ವಾಸವಿದೆ. ಶೀಘ್ರದಲ್ಲಿಯೇ ಲೋಕೋಪಯೋಗಿ ಇಲಾಖೆ ವ್ಯಾಪ್ತಿಯ ಕಾಮಗಾರಿಗೆ ಅನುಮತಿ ದೊರೆಯಲಿದೆ.
ತುಂಗಭದ್ರಾ ನದಿಯ ನೀರನ್ನು ನಿರಂತರವಾಗಿ ಸಂಗ್ರಹಿಸುವ ಉದ್ದೇಶಕ್ಕೆ ಬ್ಯಾರೇಜ್ ನಿರ್ಮಿಸಲು 150 ಕೋಟಿ ರೂ. ವೆಚ್ಚದ ಯೋಜನೆ ಮಂಜೂರಿಯಾಗಿದ್ದು, ಶೀಘ್ರದಲ್ಲಿಯೇ ಟೆಂಡರ್ ಕರೆಯಲಾಗುವುದು. ಬ್ಯಾರೇಜ್ ನಿರ್ಮಾಣದಿಂದ ಬೇಸಿಗೆ ದಿನಗಳಲ್ಲಿಯೂ ನದಿಯಲ್ಲಿ ನಿರಂತರ ನೀರು ದೊರೆಯಲಿದೆ. ನಿರಂತರ ಕುಡಿಯುವ ನೀರಿನ ಯೋಜನೆಯ ಕಾಮಗಾರಿಯನ್ನು ಆದಷ್ಟು ಬೇಗನೇ ಮುಗಿಸುವಂತೆ ಸಂಬಂಧಿಸಿದವರಿಗೆ ಸೂಚನೆ ನೀಡಿದ್ದೇನೆ. ಈ ಕಾಮಗಾರಿ ಪೂರ್ಣಗೊಂಡ ಬಳಿಕ ಗುತ್ತಲ ಹಾಗೂ ಹಾವೇರಿ ಜನತೆಗೆ ನಿರಂತರವಾಗಿ ಕುಡಿಯುವ ನೀರು ದೊರೆಯಲಿದೆ.