ವಿಪರೀತ ಮದ್ಯ ಸೇವಿಸುತ್ತಿದ್ದ ವ್ಯಕ್ತಿ ನೇಣಿಗೆ ಶರಣು

Crime
Crime
Published on

ಹಾವೇರಿ: ವಿಪರೀತ ಮದ್ಯ ಸೇವಿಸುತ್ತಿದ್ದ ವ್ಯಕ್ತಿಯೊಬ್ಬ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡ ಘಟನೆ ನಗರದ ಮುಲ್ಲಾನಕೇರಿ ಬಳಿ ನಡೆದಿದೆ.

ಸುನೀಲ ಬಸವರಾಜ ನವಲಗುಂದ (22) ಮೃತ ವ್ಯಕ್ತಿ.

ಈತ ವಿಪರೀತ ಮದ್ಯ ಸೇವನೆ ಮಾಡುತ್ತಿದ್ದ. ಇದರಿಂದ ಬೇಸತ್ತು ಮುಲ್ಲಾನಕೇರಿ ಬಳಿ ಮರಕ್ಕೆ ನೇಣು ಬಿಗಿದುಕೊಂಡಿದ್ದಾನೆ. ಈ ಕುರಿತು ಶಹರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net