ಮಾಸೂರಿನಲ್ಲಿರುವ ಸಮುದಾಯ ಆರೋಗ್ಯ ಕೇಂದ್ರ ಸುಮಾರು ವರ್ಷಗಳಿಂದ 30ಕ್ಕೂ ಹೆಚ್ಚು ಹಳ್ಳಿಯ ಬಡಜನರಿಗೆ ಉತ್ತಮವಾದ ಸೇವೆ ನೀಡುತ್ತಾ ಬಂದಿದೆ. ಇದರಿಂದ ಸಾಕಷ್ಟು ಬಡ ರೋಗಿಗಳಿಗೆ ಅನುಕೂಲವಾಗಿದೆ. ಪ್ರತಿನಿತ್ಯ 400ಕ್ಕೂ ಹೆಚ್ಚು ರೋಗಿಗಳು ಇಲ್ಲಿ ಚಿಕಿತ್ಸೆ ಪಡೆಯುತ್ತಾರೆ. ಮಕ್ಕಳ ತಜ್ಞರು, ದಂತ ವೈದ್ಯರು, ಎಂಬಿಬಿಎಸ್ ಹಾಗೂ ಬಿಎಎಂಎಸ್ ವೈದ್ಯರು, ಸ್ತ್ರೀರೋಗ ತಜ್ಞರು ಸೇರಿದಂತೆ ಹಲವು ಸಿಬ್ಬಂದಿ ಸೇವೆ ಸಲ್ಲಿಸುತ್ತಿದ್ದಾರೆ. ಹೊಸ ತೀರ್ವನದಿಂದ ಇಲ್ಲಿನ ಹಲವು ವೈದ್ಯರು ವರ್ಗಾವಣೆಯಾಗುತ್ತಾರೆ. ಇದರಿಂದ ಇಲ್ಲಿನ ಜನರಿಗೆ ಸಾಕಷ್ಟು ಸಮಸ್ಯೆಯಾಗುತ್ತದೆ ಎಂದರು.
ಕೂಡಲೇ ಸಂಬಂಧಪಟ್ಟ ಅಧಿಕಾರಿಗಳು, ಸರ್ಕಾರ ಎಚ್ಚೆತ್ತುಕೊಂಡು ಈ ತೀರ್ಮಾನ ಕೈಬಿಡಬೇಕು. ಇಲ್ಲದಿದ್ದರೆ ಈ ಭಾಗದ ಜನರು ಬೃಹತ್ ಹೋರಾಟಕ್ಕೆ ಇಳಿಯಬೇಕಾಗುತ್ತದೆ. ನಾಲ್ಕು ದಿನದೊಳಗಾಗಿ ಡಿಎಚ್ಒ ಅವರು ಸ್ಥಳಕ್ಕೆ ಭೇಟಿ ನೀಡಿ, ಸರ್ಕಾರ ನಿರ್ಧಾರ ಹಿಂಪಡೆದಿದ್ದೇವೆಂದು ಹೇಳಬೇಕು. ಇಲ್ಲದಿದ್ದರೆ ಬೃಹತ್ ಹೋರಾಟ ನಿಶ್ಚಿತ ಎಂದು ಎಚ್ಚರಿಸಿದರು.
ರಾಜು ಸುಣಗಾರ, ಶಿವರಾಜ ಹೊರಟ್ಟಿ, ನಾಗರಾಜ ಹಿರೇಮಠ, ರೇಣುಕಪ್ಪ ಸಜ್ಜನಶೆಟ್ರ, ಸುರೇಶ ಬಡಗೇರ, ಇರ್ಫಾನ್ ಕಿರವಾಡಿ, ಗ್ರಾಪಂ ಸದಸ್ಯರು, ಗ್ರಾಮದ ಮುಖಂಡರು ಇದ್ದರು.