ಖಾಸಗಿ ಬಸ್ ಪಲ್ಟಿ: ಓರ್ವ ಸಾವು, 33 ಜನರಿಗೆ ಗಾಯ

Crime
Crime
Published on

ಹಾವೇರಿ: ಚಾಲಕನ ನಿಯಂತ್ರಣ ತಪ್ಪಿದ ಖಾಸಗಿ ಬಸ್ ಪಲ್ಟಿಯಾಗಿ ಯುವಕನೊಬ್ಬ ಮೃತಪಟ್ಟಿದ್ದು, 33 ಪ್ರಯಾಣಿಕರು ಗಾಯಗೊಂಡಿರುವ ಘಟನೆ ನಗರದ ಹೊರವಲಯದ ರಾಷ್ಟ್ರೀಯ ಹೆದ್ದಾರಿ-48ರಲ್ಲಿ ನಡೆದಿದೆ.

ಮಹಾರಾಷ್ಟ್ರದ ಬಾವರಸಿಂಗ್ ರಾಜೇಂದ್ರಸಿಂಗ್ (18) ಎಂದು ಮೃತ ವ್ಯಕ್ತಿ.

ಗೋವಾದಿಂದ ಬೆಂಗಳೂರಿಗೆ ತೆರಳುತ್ತಿದ್ದ ವೇಳೆ ಬಸ್ ನಗರದ ಹೊರವಲಯದ ರಾಷ್ಟ್ರೀಯ ಹೆದ್ದಾರಿ- 48ರಲ್ಲಿ ನಿಯಂತ್ರಣ ತಪ್ಪಿ ಪಲ್ಟಿಯಾಗಿದೆ. ಬಸ್ನಲ್ಲಿ ಒಟ್ಟು 34 ಜನರು ಪ್ರಯಾಣಿಸುತ್ತಿದ್ದರು, ಅಪಘಾತದಲ್ಲಿ 33 ಪ್ರಯಾಣಿಕರಿಗೆ ಸಣ್ಣಪುಟ್ಟ ಗಾಯಗಳಾಗಿದ್ದು, ಗಾಯಾಳುಗಳನ್ನು ಸ್ಥಳಿಯರ ನೆರವಿನಿಂದ ಹಾಗೂ ತುರ್ತು ಸೇವೆಗಳ ಮೂಲಕ ಹಾವೇರಿ ಜಿಲ್ಲಾಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಯಿತು.

ಅಪಘಾತದ ಸುದ್ದಿ ತಿಳಿಯುತ್ತಿದ್ದಂತೆ ಸಂಚಾರ ಠಾಣೆಯ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದರು. ಅಪಘಾತದಿಂದ ರಸ್ತೆ ಸಂಚಾರಕ್ಕೆ ಅಡಚಣೆಯಾಗದಂತೆ ಅಗ್ನಿಶಾಮಕ ದಳದ ಸಿಬ್ಬಂದಿ ಕಾರ್ಯಾಚರಣೆ ನಡೆಸಿ ಪಲ್ಟಿಯಾದ ಬಸ್ನ್ನು ಸ್ಥಳದಿಂದ ಬೇರೆಡೆಗೆ ಸ್ಥಳಾಂತರಿಸಿದರು. ಈ ಕುರಿತು ಹಾವೇರಿ ಸಂಚಾರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net