ಲಾರಿ ಪಲ್ಟಿಯಾಗಿ ಚಾಲಕ ಸಾವು

Crime
Crime
Published on

ಶಿಗ್ಗಾಂವಿ: ಲಾರಿ ಪಲ್ಟಿಯಾಗಿ ಚಾಲಕ ಮೃತಪಟ್ಟ ಘಟನೆ ಪಟ್ಟಣದ ಹೊರವಲಯದ ರಾಷ್ಟ್ರೀಯ ಹೆದ್ದಾರಿಯಲ್ಲಿ ನಡೆದಿದೆ.

ಧಾರವಾಡದ ಮಣಿಕಿಲ್ಲಾದ ನಿವಾಸಿ ಅಕ್ತರಅಹ್ಮದ್ ಶಮಶುದ್ದಿನ ಯರಗಟ್ಟಿ (72) ಮೃತ ಲಾರಿ ಚಾಲಕ.

ಈತ ಹುಬ್ಬಳ್ಳಿ ಕಡೆಯಿಂದ ಬೆಂಗಳೂರು ಕಡೆಗೆ ತೆರಳುತ್ತಿದ್ದ ಸಮಯದಲ್ಲಿ ಲಾರಿ ನಿಯಂತ್ರಣ ತಪ್ಪಿ ಪಲ್ಟಿಯಾಗಿದೆ. ಇದರಿಂದ ಅಕ್ತರಹ್ಮದ್ ಸ್ಥಳದಲ್ಲಿಯೆ ಮೃತಪಟ್ಟಿದ್ದಾನೆ. ಈ ಕುರಿತು ಶಿಗ್ಗಾಂವಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net