homes ಸರ್ಕಾರದಿಂದ ಬಡವರಿಗೆ ಶಾಶ್ವತ ಮನೆ

ಹಾನಗಲ್ಲ ತಾಲೂಕಿನ ಮಾಸನಕಟ್ಟಿ ಗ್ರಾಮದಲ್ಲಿ ಕಂದಾಯ ಗ್ರಾಮ, ಉಪ ಗ್ರಾಮಗಳ ಲಾನುಭವಿ ಕುಟುಂಬಗಳ ಮನೆ homes ಹಕ್ಕುಪತ್ರ ವಿತರಣಾ ಕಾರ್ಯಕ್ರಮವನ್ನು ಶಾಸಕ ಶ್ರೀನಿವಾಸ ಮಾನೆ ಉದ್ಘಾಟಿಸಿದರು.
ಹಾನಗಲ್ಲ ತಾಲೂಕಿನ ಮಾಸನಕಟ್ಟಿ ಗ್ರಾಮದಲ್ಲಿ ಕಂದಾಯ ಗ್ರಾಮ, ಉಪ ಗ್ರಾಮಗಳ ಲಾನುಭವಿ ಕುಟುಂಬಗಳ ಮನೆ homes ಹಕ್ಕುಪತ್ರ ವಿತರಣಾ ಕಾರ್ಯಕ್ರಮವನ್ನು ಶಾಸಕ ಶ್ರೀನಿವಾಸ ಮಾನೆ ಉದ್ಘಾಟಿಸಿದರು.
Published on
ಹಾನಗಲ್ಲ: ಬಡವರಿಗಾಗಿ ಕಾರ್ಯಕ್ರಮಗಳ ಮೂಲಕ ಶಕ್ತಿ ತುಂಬಿ, ರಕ್ಷಣೆ ಕೊಡುತ್ತಿರುವ ಕಾಂಗ್ರೆಸ್ ಸರ್ಕಾರ ಇದೀಗ ತಾಲೂಕಿನ 13 ಸಾವಿರಕ್ಕೂ ಹೆಚ್ಚು ಕುಟುಂಬಗಳಿಗೆ ಕಳೆದ 2 ವರ್ಷಗಳಿಂದ ನಿರಂತರ ಶ್ರಮ ವಹಿಸಿ, ಶಾಶ್ವತ ಮನೆ homes ಮಾಲೀಕತ್ವ ದೊರಕಿಸಿದೆ ಎಂದು ಶಾಸಕ ಶ್ರೀನಿವಾಸ ಮಾನೆ ಹೇಳಿದರು.
ತಾಲೂಕಿನ ಮಾಸನಕಟ್ಟಿ ಗ್ರಾಮದಲ್ಲಿ ಸೋಮವಾರ ಆಯೋಜಿಸಿದ್ದ ಕಂದಾಯ ಗ್ರಾಮ, ಉಪ ಗ್ರಾಮಗಳ ಲಾನುಭವಿ ಕುಟುಂಬಗಳಿಗೆ ಮನೆಗಳ ಹಕ್ಕುಪತ್ರ ವಿತರಣಾ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದರು.
ಕಂದಾಯ, ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್, ನೋಂದಣಿ, ಸರ್ವೇ ಇಲಾಖೆಗಳ ಅಧಿಕಾರಿಗಳು ಮತ್ತು ಸಿಬ್ಬಂದಿಯ ಶ್ರಮ ಈ ಕಾರ್ಯದಲ್ಲಿ ಸಾಕಷ್ಟಿದೆ. ಕನಿಷ್ಠ 10 ಲಕ್ಷ ರೂ. ಬೆಲೆ ಬಾಳುವ ಆಸ್ತಿಯ ಮಾಲೀಕತ್ವ ಬಡ ಮತ್ತು ಮಧ್ಯಮ ವರ್ಗಗಳಿಗೆ ಸೇರಿದ ಕುಟುಂಬಗಳಿಗೆ ಸಿಕ್ಕಿದೆ. ಹಕ್ಕುಪತ್ರ ವಿತರಿಸುವ ಕೆಲಸ ಒಂದೇ ದಿನದಲ್ಲಿ ಆಗಿಲ್ಲ.
ಇದರ ಹಿಂದಿನ ಪರಿಶ್ರಮ ದೊಡ್ಡದಿದೆ. ಕಂದಾಯ ಗ್ರಾಮ ಮತ್ತು ಉಪ ಗ್ರಾಮಗಳಿಗೆ ಅನುಮೋದನೆ ಪಡೆಯುವುದು ಸುಲಭದ ಕೆಲಸವಲ್ಲ. ತಾಲೂಕಿನಿಂದ ಕಳುಹಿಸಿದ ಎಲ್ಲ ಪ್ರಸ್ತಾವನೆಗಳಿಗೆ ರಾಜ್ಯ ಸರ್ಕಾರ ಅನುಮೋದನೆ ನೀಡಿದೆ ಎಂದರು.
ತಹಸೀಲ್ದಾರ್ ಎಸ್.ರೇಣುಕಾ ಮಾತನಾಡಿ, ಸರ್ಕಾರಿ ಮತ್ತು ಖಾಸಗಿ ಜಮೀನುಗಳಲ್ಲಿ ಮನೆ ಕಟ್ಟಿಕೊಂಡು ಅನೇಕ ವರ್ಷಗಳಿಂದ ವಾಸಿಸುತ್ತಿದ್ದ ಕುಟುಂಬಗಳು ನಿತ್ಯವೂ ಆತಂಕದಲ್ಲಿಯೇ ಕಾಲ ಕಳೆಯುವ ಪರಿಸ್ಥಿತಿ ಇತ್ತು. ಆದರೆ, ಶಾಸಕ ಶ್ರೀನಿವಾಸ ಮಾನೆ ಅವರ ಕಳಕಳಿಯಿಂದ ಇಂದು ಸಾವಿರಾರು ಕುಟುಂಬಗಳಿಗೆ ಹಕ್ಕುಪತ್ರ ಸಿಕ್ಕಿದೆ ಎಂದರು.
ಇದೇ ಸಂದರ್ಭದಲ್ಲಿ ಆಲದಕಟ್ಟಿ ಗ್ರಾಮದ 107, ಇನಾಂ ದ್ಯಾಮನಕೊಪ್ಪ 87, ವಳಗೇರಿ 129, ಮಾಸನಕಟ್ಟಿ ಗ್ರಾಮದ 160 ಲಾನುಭವಿ ಕುಟುಂಬಗಳಿಗೆ ಹಕ್ಕುಪತ್ರ ವಿತರಿಸಲಾಯಿತು.
ಕೆಪಿಸಿಸಿ ಸದಸ್ಯರಾದ ಟಾಕನಗೌಡ ಪಾಟೀಲ, ಖ್ವಾಜಾಮೊಹಿದ್ದೀನ್ ಜಮಾದಾರ, ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಹನುಮಂತಪ್ಪ ಮರಗಡಿ, ಮಂಜು ಗೊರಣ್ಣನವರ, ಹಾನಗಲ್ಲ ನಗರ ಕಾಂಗ್ರೆಸ್ ಅಧ್ಯಕ್ಷ ಮತೀನ್ ಶಿರಬಡಗಿ, ಕಂದಾಯ ಇಲಾಖೆಯ ಅಧಿಕಾರಿಗಳು ಇದ್ದರು.
ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net