ನೇಣು ಬಿಗಿದುಕೊಂಡ ಸ್ಥಿತಿಯಲ್ಲಿ ಶವಪತ್ತೆ

Crime
Crime
Published on

ಹಾವೇರಿ: ನೇಣು ಬಿಗಿದ ಸ್ಥಿತಿಯಲ್ಲಿ ವ್ಯಕ್ತಿಯೊಬ್ಬನ ಶವವೊಂದು ನಗರದ ಕೆರಿಮತ್ತಿಹಳ್ಳಿ ರಸ್ತೆಯ ನಗರಸಭೆ ಜಾಗದಲ್ಲಿ ಪತ್ತೆಯಾಗಿದ್ದು, ಕೊಲೆ ಶಂಕೆ ವ್ಯಕ್ತವಾಗಿದೆ.

ಮೃತ ವ್ಯಕ್ತಿಯು 35&40 ವಯಸ್ಸಿನವಾಗಿದ್ದು, ಔಡಲ ಗಿಡಕ್ಕೆ ನೇಣು ಬಿಗಿದುಕೊಂಡ ಸ್ಥಿತಿಯಲ್ಲಿ ಪತ್ತೆಯಾಗಿದೆ.

ಈ ಕುರಿತು ನಗರಸಭೆ ಪೌರ ಕಾಮಿರ್ಕ ನೀಲಪ್ಪ ಎಂಬುವರು ದೂರು ನೀಡಿದ್ದು, ವ್ಯಕ್ತಿಯೂ ನೇಣು ಬಿಗಿದುಕೊಂಡ ಸ್ಥಿತಿ ನೋಡಿದರೆ ಇದು ಕೊಲೆ ಎಂಬ ಶಂಕೆ ವ್ಯಕ್ತವಾಗುತ್ತಿದೆ. ಆದ್ದರಿಂದ ಈತನ ಸಾವಿನಲ್ಲಿ ಸಂಶಯವಿದ್ದು ಈ ಕುರಿತು ತನಿಖೆ ನಡೆಸಬೇಕು ಎಂದು ಒತ್ತಾಯಿಸಿದ್ದಾನೆ. ಈ ಕುರಿತು ಶಹರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಪೊಲೀಸರು ತನಿಖೆ ಕೈಗೊಂಡಿದ್ದಾರೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net