ನೇಣು ಬಿಗಿದುಕೊಂಡು ವ್ಯಕ್ತಿ ಆತ್ಮಹತ್ಯೆ; ಸಂಶಯ ವ್ಯಕ್ತಪಡಿಸಿದ ಕುಟುಂಬದವರು

Crime
Crime
Published on

ರಾಣೆಬೆನ್ನೂರು: ವ್ಯಕ್ತಿಯೊಬ್ಬ ನೇಣು ಬಿಗಿದುಕೊಂಡು ಆತ್ಮಹತ್ಯ ಮಾಡಿಕೊಂಡ ಘಟನೆ ತಾಲೂಕಿನ ಕೋಡಿಯಾಲ ಹೊಸಪೇಟೆ ಗ್ರಾಮದಲ್ಲಿ ನಡೆದಿದೆ.

ರಟ್ಟಿಹಳ್ಳಿ ತಾಲೂಕಿನ ಮಾಸೂರ ಗ್ರಾಮದ ಪ್ರಶಾಂತ ಚೌಡಪ್ಪ ಹಿತ್ತಲಮನಿ (30) ಮೃತ ವ್ಯಕ್ತಿ.

ಈತ ಯಾವ ಕಾರಣಕ್ಕೆ ನೇಣು ಬಿಗಿದುಕೊಂಡಿದ್ದಾನೆ ಎಂಬುದು ಗೊತ್ತಿಲ್ಲ. ಈತನ ಸಾವಿನಲ್ಲಿ ಸಂಶಯವಿದ್ದು ಸೂಕ್ತ ತನಿಖೆ ನಡೆಸುವಂತೆ ಮೃತನ ಸಂಬಂಧಿಕರು ಪೊಲೀಸರಿಗೆ ದೂರು ನೀಡಿದ್ದಾರೆ. ಈ ಕುರಿತು ಕುಮಾರಪಟ್ಟಣ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಪೊಲೀಸರು ತನಿಖೆ ಕೈಗೊಂಡಿದ್ದಾರೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net