bjp protest ಬಿಜೆಪಿ ಕಾರ್ಯಕರ್ತರಿಂದ ಪ್ರತಿಭಟನೆ

ರಟ್ಟಿಹಳ್ಳಿ ಪಟ್ಟಣದಲ್ಲಿ ಮಹಿಳಾ ಮೀಸಲಾತಿಯನ್ನು ವಿರೋಧಿಸಿದ ಕಾಂಗ್ರೆಸ್ ಪಕ್ಷದ ವಿರುದ್ದ ಬಿಜೆಪಿ (bjp protest) ಘಟಕದಿಂದ ಪ್ರತಿಭಟನೆ ನಡೆಸಲಾಯಿತು.
ರಟ್ಟಿಹಳ್ಳಿ ಪಟ್ಟಣದಲ್ಲಿ ಮಹಿಳಾ ಮೀಸಲಾತಿಯನ್ನು ವಿರೋಧಿಸಿದ ಕಾಂಗ್ರೆಸ್ ಪಕ್ಷದ ವಿರುದ್ದ ಬಿಜೆಪಿ (bjp protest) ಘಟಕದಿಂದ ಪ್ರತಿಭಟನೆ ನಡೆಸಲಾಯಿತು.
Published on
ರಟ್ಟಿಹಳ್ಳಿ: ಶಾಸನಸಭೆಯಲ್ಲಿ ಮಹಿಳೆಯರಿಗೆ ಶೇ. 33ರಷ್ಟು ಮೀಸಲಾತಿ ಕಲ್ಪಿಸುವ ಮಸೂದೆ ವಿರುದ್ಧ ಸಂಸತ್ತಿನಲ್ಲಿ ಮತ ಚಲಾಯಿಸಿದ ಕಾಂಗ್ರೆಸ್ ವಿರುದ್ಧ ಪಟ್ಟಣದ ಹಳೇಬಸ್ ನಿಲ್ದಾಣದಲ್ಲಿ ಬಿಜೆಪಿ (bjp Protest) ವತಿಯಿಂದ ಪ್ರತಿಭಟನೆ ನಡೆಯಿತು.
ಬಿಜೆಪಿ ಮಂಡಲ ಅಧ್ಯಕ್ಷ ದೇವರಾಜ ನಾಗಣ್ಣನವರ ಮಾತನಾಡಿ, ವಿಧಾನಸಭೆ ಮತ್ತು ಲೋಕಸಭೆಯಲ್ಲಿ ಮಹಿಳೆಯರಿಗೆ ಶೇ. 33 ಮೀಸಲಾತಿ ನೀಡುವ ಉದ್ದೇಶದಿಂದ ಮಂಡಿಸಿದ ಮಸೂದೆ ವಿರುದ್ಧ ಕಾಂಗ್ರೆಸ್ ಸಂಸದರು ಮತ ಚಲಾಯಿಸಿ ಮಹಿಳೆಯರಿಗೆ ಅನ್ಯಾಯ ಮಾಡಿದ್ದಾರೆ. ಮುಂಬರುವ ಎಲ್ಲ ಚುನಾವಣೆಗಳಲ್ಲಿ ಮಹಿಳೆಯರು ಕಾಂಗ್ರೆಸ್​ಗೆ ತಕ್ಕ ಉತ್ತರ ನೀಡಲಿದ್ದಾರೆ ಎಂದರು.
ಪಪಂ ಸದಸ್ಯ ಬಸವರಾಜ ಆಡಿನವರ, ಬಸವರಾಜ ಕಟ್ಟೀಮನಿ, ತಾಪಂ ಮಾಜಿ ಸದಸ್ಯ ಆರ್.ಎನ್. ಗಂಗೋಳ, ಶಂಭಣ್ಣ ಗೂಳಪ್ಪನವರ, ಜಿ.ಪಿ. ಪ್ರಕಾಶ, ಸುಶೀಲ ನಾಡಗೇರ, ಹನುಮಂತಪ್ಪ ಗಾಜೇರ, ರಾಘವೇಂದ್ರ ಹರವಿಶೆಟ್ಟರ್, ಸುರೇಶ ದ್ಯಾವಕ್ಕಳವರ, ಪ್ರಕಾಶ ಕೊರವರ, ಪ್ರಶಾಂತ ದ್ಯಾವಕ್ಕಳವರ, ಶ್ರೀನಿವಾಸ ಬೈರಪ್ಪನವರ, ಬಸಣ್ಣ ಬಾಗೋಡಿ, ಸುನೀಲ ಕಟ್ಟೀಮನಿ, ರಾಜುಗೌಡ ಪಾಟೀಲ, ಗಿರೀಶ ಅಂಗರಗಟ್ಟಿ, ಸರೋಜಾ ಹುರಕಡ್ಲಿ, ಕಾವ್ಯಾ ಪಾಟೀಲ, ಲತಾ ಪಾಟೀಲ, ಬೇಬಕ್ಕ ಜಾಧವ, ಸಿದ್ದಾರ್ಥ, ಸುನೀಲ ಸರಶೆಟ್ಟರ್, ಇತರರು ಇದ್ದರು.
ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net