ನಗರದಲ್ಲಿನ ಪುಟ್ಪಾತ್ ತೆರವುಗೊಳಿಸಲು ಸಾರ್ವಜನಿಕರ ಆಗ್ರಹ

ಮನವಿ ಸಲ್ಲಿಕೆ
ಮನವಿ ಸಲ್ಲಿಕೆ
Published on

ರಾಣೆಬೆನ್ನೂರ: ನಗರದಲ್ಲಿ ಬಹಳಷ್ಟು ಕಡೆಗಳಲ್ಲಿ ಪುಟ್ಪಾತ್ ಅತಿಕ್ರಮಣವಾಗಿದ್ದು ಕೂಡಲೇ ತೆರವುಗೊಳಿಸಬೇಕು ಎಂದು ರಾಜ್ಯ ರೈತ ಸಂದ ನೇತೃತ್ವದಲ್ಲಿ ಸಾರ್ವಜನಿಕರು ಮಂಗಳವಾರ ನಗರಸಭೆ ಆಯುಕ್ತ ಕ್ಕೀರಪ್ಪ ಇಂಗಳಗಿ ಅವರಿಗೆ ಮನವಿ ಸಲ್ಲಿಸಿದರು.

ನೇತೃತ್ವ ವಹಿಸಿದ್ದ ರೈತ ಸಂದ ತಾಲೂಕು ಅಧ್ಯಕ್ಷ ಹನುಮಂತಪ್ಪ ಕಬ್ಬಾರ ಮಾತನಾಡಿ, ನಗರದ ಎಡಿಬಿ ರಸ್ತೆ, ಎಂ.ಜಿ. ರಸ್ತೆಯಲ್ಲಿ ಕೆಲ ವ್ಯಾಪಾರಸ್ಥರು ಪುಟ್ಪಾತ್ ಮೇಲೆ ಗೂಡಂಗಡಿಗಳನ್ನು ಹಾಕಿಕೊಂಡು ವ್ಯಾಪಾರ ಮಾಡುತ್ತಿದ್ದಾರೆ. ಇದರಿಂದ ಸಾರ್ವಜನಿಕರ ಓಡಾಟಕ್ಕೆ ತೀವ್ರ ತೊಂದರೆ ಉಂಟಾಗುತ್ತಿದೆ.

ಈ ರಸ್ತೆಗಳಲ್ಲಿ ಶಾಲಾ&ಕಾಲೇಜ್, ನಗರಸಭೆ, ತಾಪಂ ಸೇರಿ ವಿವಿಧ ಸರ್ಕಾರಿ ಕಚೇರಿಗಳಿರುವ ಕಾರಣ ನಿತ್ಯವೂ ಸಾವಿರಾರು ಜನ ಓಡಾಡುತ್ತಾರೆ. ಆದರೆ, ಪುಟ್ಪಾತ್ ಅತಿಕ್ರಮಣದಿಂದ ಜನರು ರಸ್ತೆ ಮಧ್ಯೆದಲ್ಲಿಯೆ ಓಡಾಡಬೇಕಾದ ಅನಿವಾರ್ಯತೆ ಎದುರಾಗಿದೆ. ಇದರಿಂದ ಅಪಘಾತಗಳು ನಡೆದು ಜನರು ಆಸ್ಪತ್ರೆಗೆ ಸೇರುವಂತಾಗಿದೆ. ಆದ್ದರಿಂದ ನಗರಸಭೆ ಅಧಿಕಾರಿಗಳು ಕೂಡಲೇ ಸೂಕ್ತ ಕ್ರಮ ಕೈಗೊಂಡು ಪುಟ್ಪಾತ್ ಅತಿಕ್ರಮಣ ತೆರವುಗೊಳಿಸಬೇಕು ಎಂದು ಒತ್ತಾಯಿಸಿದರು.

ನಗರಸಭೆ ಮಾಜಿ ಸದಸ್ಯ ಪ್ರಕಾಶ ಪೂಜಾರ, ಮೈಲಪ್ಪ ಗೋಣಿಬಸಮ್ಮನವರ, ಸಿದ್ದಪ್ಪ ಗುಡಿಯವರ, ರಾಮಚಂದ್ರಪ್ಪ ನಾಯಕ, ಹನುಮಂತಪ್ಪ ಮೂಲಿಮನಿ, ಭರಮಪ್ಪ ಸಿರಗೇರ, ಶೈಲಮ್ಮ ಹರನಗಿರಿ, ಲಲಿತಮ್ಮ ಲಮಾಣಿ ಮತ್ತಿತರರು ಇದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net