ರಜಪೂತ Rajput ಅಭಿವೃದ್ಧಿ ಮಂಡಳಿ ಸ್ಥಾಪಿಸಬೇಕು ಎಂದು ಆಗ್ರಹಿಸಿ ಶ್ರೀ ಮಹಾರಾಣಾ ಪ್ರತಾಪಸಿಂಗ್ ರಜಪೂತ ಸಮಾಜದಿಂದ ಹಾನಗಲ್ಲ ತಹಸೀಲ್ದಾರ್ ವಿಠ್ಠಲ ಚೌಗಲಾ ಅವರ ಮೂಲಕ ರಾಜ್ಯ ಸರ್ಕಾರಕ್ಕೆ ಶುಕ್ರವಾರ ಮನವಿ ಸಲ್ಲಿಸಲಾಯಿತು.
ಹಾನಗಲ್ಲ: ರಜಪೂತ ಸಮಾಜದ ಅಭಿವೃದ್ಧಿಗಾಗಿ ರಜಪೂತ Rajput ಅಭಿವೃದ್ಧಿ ಮಂಡಳಿ ಸ್ಥಾಪಿಸಬೇಕು ಎಂದು ಆಗ್ರಹಿಸಿ ಶ್ರೀ ಮಹಾರಾಣಾ ಪ್ರತಾಪಸಿಂಗ್ ರಜಪೂತ ಸಮಾಜದಿಂದ ತಹಸೀಲ್ದಾರ್ ವಿಠ್ಠಲ ಚೌಗಲಾ ಅವರ ಮೂಲಕ ರಾಜ್ಯ ಸರ್ಕಾರಕ್ಕೆ ಶುಕ್ರವಾರ ಮನವಿ ಸಲ್ಲಿಸಲಾಯಿತು.
ರಾಜ್ಯದಲ್ಲಿ ಲಕ್ಷಾಂತರ ಜನಸಂಖ್ಯೆ ಹೊಂದಿರುವ ರಜಪೂತ ಸಮಾಜವು ಆರ್ಥಿಕವಾಗಿ, ಶೈಕ್ಷಣಿಕವಾಗಿ ಹಾಗೂ ಉದ್ಯೋಗ ಕ್ಷೇತ್ರದಲ್ಲಿ ಹಿಂದುಳಿದಿದೆ. ರಜಪೂತ ಸಮಾಜದ ಯುವಪೀಳಿಗೆ ಸೂಕ್ತ ಪ್ರೋತ್ಸಾಹ ಮತ್ತು ಮಾರ್ಗದರ್ಶನ ಸಿಗದೆ ಸಮಾಜದ ಯುವಕರು ಮುಖ್ಯವಾಹಿನಿಗೆ ಬರಲು ಸಾಧ್ಯವಾಗುತ್ತಿಲ್ಲ.
ಕಲಬುರಗಿ ಜಿಲ್ಲಾಡಳಿತದ ಸಮ್ಮುಖದಲ್ಲಿ ನಡೆದ ರಜಪೂತ ಸಮಾಜದ ಕೌಟುಂಬಿಕ ಸಮೀಕ್ಷೆ ಹಾಗೂ ಡಿಜಿಟಲ್ ನೋಂದಣಿ ಪ್ರಕ್ರಿಯೆಯು ಯಶಸ್ವಿಯಾಗಿ ನಡೆದಿದೆ. ಈ ಸಮಗ್ರ ದತ್ತಾಂಶ ವರದಿಯು ಬೆಂಗಳೂರಿನ ಹಿಂದುಳಿದ ವರ್ಗಗಳ ಕಲ್ಯಾಣ ಆಯೋಗದ ಪರಿಶೀಲನೆಯಲ್ಲಿದೆ.
ಕಲಬುರಗಿ ಜಿಲ್ಲೆಯಲ್ಲಿ ಆರಂಭವಾಗಿರುವ ದತ್ತಾಂಶ ಸಂಗ್ರಹಣೆ ಪ್ರಕ್ರಿಯೆಗೆ ಪೂರಕವಾಗಿ ಹಾನಗಲ್ಲ ತಾಲೂಕಿನ ರಜಪೂತ ಸಮಾಜದವರು ಕೈಜೋಡಿಸಿದ್ದೇವೆ. ಆದ್ದರಿಂದ ರಜಪೂತ ಸಮಾಜದ ಸಮಗ್ರ ಅಭಿವೃದ್ಧಿಗಾಗಿ ರಜಪೂತ ಅಭಿವೃದ್ಧಿ ಮಂಡಳಿಯನ್ನು ಸ್ಥಾಪನೆ ಮಾಡಬೇಕೆಂದು ಮನವಿಯಲ್ಲಿ ಆಗ್ರಹಿಸಲಾಗಿದೆ.