

ಶಿಗ್ಗಾಂವಿ: ನಿವೃತ್ತ ವೇತನದ ಮೇಲೆ 4-5 ಲಕ್ಷ ರೂ. ಸಾಲ ಮಾಡಿದ ನಿವೃತ್ತ ನೌಕರರೊಬ್ಬರು ಸಾಲ ತೀರಿಸಲಾಗದೆ ವಿಷ ಸೇವಿಸಿ ಆತ್ಮಹತ್ಯೆ ಮಾಡಿಕೊಂಡ ಘಟನೆ ಪಟ್ಟಣದ ಖಾಸಗಿ ಶಾಲೆ ಬಳಿ ನಡೆದಿದೆ.
ತಾಲೂಕಿನ ಕ್ಯಾಲಕೊಂಡ ಗ್ರಾಮದ ನೀಲಪ್ಪ ನಿಂಗಪ್ಪ ಹೊಸಮನಿ (68) ಆತ್ಮಹತ್ಯೆ ಮಾಡಿಕೊಂಡ ನಿವೃತ್ತ ನೌಕರ.
ಇವರು ನಿವೃತ್ತ ವೇತನದ ಮೇಲೆ 4-5 ಲಕ್ಷ ರೂ. ಸಾಲ ಮಾಡಿಕೊಂಡಿದ್ದರು. ಆದರೆ, ಇದನ್ನು ತೀರಿಸಲಾಗದೆ ಮನನೊಂದು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಈ ಕುರಿತು ಶಿಗ್ಗಾಂವಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.