ರಸ್ತೆ ಬದಿ ನಡೆದುಕೊಂಡು ಹೋಗುತ್ತಿದ್ದ ವ್ಯಕ್ತಿ ಬಿದ್ದು ಸಾವು

Crime
Crime
Published on

ಹಾನಗಲ್ಲ: ರಸ್ತೆ ಬದಿ ನಡೆದುಕೊಂಡು ಹೋಗುತ್ತಿದ್ದ ವ್ಯಕ್ತಿಯೊಬ್ಬ ಕಾಲು ಜಾರಿ ಬಿದ್ದು ಮೃತಪಟ್ಟ ಘಟನೆ ತಾಲೂಕಿನ ಲಕ್ಕಿಕೊಪ್ಪ ಗ್ರಾಮದ ನಡೆದಿದೆ.

ಯಲಿವಾಳ ಗ್ರಾಮದ ಫಕ್ಕೀರಯ್ಯ ಗುರುಪಾದಯ್ಯ ಹಿರೇಮಠ (27) ಮೃತ ವ್ಯಕ್ತಿ.

ಈತ ರಸ್ತೆ ಬದಿ ನಡೆದುಕೊಂಡು ಹೋಗುತ್ತಿದ್ದ ಸಮಯದಲ್ಲಿ ಆಕಸ್ಮಿಕವಾಗಿ ಕಾಲು ಜಾರಿ ಬಿದ್ದಿದ್ದಾನೆ. ಇದರಿಂದ ತಲೆ ಹಾಗೂ ಕಿವಿಯಲ್ಲಿ ರಕ್ತ ಬಂದಿದ್ದು ಕೂಡಲೇ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ಕೊಡಿಸಲಾಗಿದೆ. ಆದರೆ, ಚಿಕಿತ್ಸೆಗೆ ಸ್ಪಂದಿಸದೆ ಮೃತಪಟ್ಟಿದ್ದಾನೆ. ಈ ಕುರಿತು ಹಾನಗಲ್ಲ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net