ಅಕ್ರಮವಾಗಿ ಸಾಗಿಸುತ್ತಿದ್ದ ಮರಳು ವಶ

Crime
Crime
Published on

ಹಾವೇರಿ: ವರದಾ ನದಿಪಾತ್ರದಿಂದ ಅಕ್ರಮವಾಗಿ ಸಾಗಾಟ ಮಾಡುತ್ತಿದ್ದ 17 ಸಾವಿರ ರೂ. ಮೌಲ್ಯದ 10 ಮೆಟ್ರಿಕ್ ಟನ್ ಮರಳನ್ನು ಪೊಲೀಸರು ವಶಪಡಿಸಿಕೊಂಡ ಘಟನೆ ತಾಲೂಕಿನ ಹೊಸರಿತ್ತಿ ಗ್ರಾಮದ ಬಳಿ ನಡೆದಿದೆ.

ಯಾರೋ ಆರೋಪಿತರು ಮಜಡಾ ಮತ್ತು ಟ್ರ್ಯಾಕ್ಟರ್ನಲ್ಲಿ ಅಕ್ರಮವಾಗಿ ಮರಳನ್ನು ತುಂಬಿಕೊಂಡು ಹೋಗುತ್ತಿದ್ದ ಸಮಯದಲ್ಲಿ ಪೊಲೀಸರು ಹಿಡಿದು ಮರಳು ಹಾಗೂ ವಾಹನ ವಶಪಡಿಸಿಕೊಂಡಿದ್ದಾರೆ. ಈ ಕುರಿತು ಗುತ್ತಲ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net