

ರಾಣೆಬೆನ್ನೂರ: 8ನೇ ತರಗತಿ ವಿದ್ಯಾರ್ಥಿನಿಗೆ ಸಹ ಶಿಕ್ಷಕನೊಬ್ಬ ಲೈಂಗಿಕ ಕಿರುಕುಳ ನೀಡಿದ ಘಟನೆ ನಗರದ ಅನುದಾನಿತ ಶಾಲೆವೊಂದರಲ್ಲಿ ನಡೆದಿದೆ.
ಬ್ಯಾಡಗಿ ತಾಲೂಕಿನ ಕದರಮಂಡಲಗಿ ಗ್ರಾಮದ ಶಿವಪ್ಪ ವೀರಪ್ಪ ಉಜ್ಜನಿ (40) ಕಿರುಕುಳ ನೀಡಿದ ಆರೋಪಿ.
ಈತ ಇಲ್ಲಿಯ ಬನಶಂಕರಿ ನಗರದಲ್ಲಿ ವಾಸವಾಗಿದ್ದ. ವಿದ್ಯಾರ್ಥಿನಿಯೊಬ್ಬಳಿಗೆ ಭಾನುವಾರ ವಿಶೇಷ ತರಗತಿ ಇದೆ ಬಾ ಎಂದು ಶಾಲೆಗೆ ಕರೆಯಿಸಿಕೊಂಡು ಲೈಂಗಿಕ ಕಿರುಕುಳ ನೀಡಿದ್ದಾನೆ.
ವಿದ್ಯಾರ್ಥಿನಿಯು ಮನೆಯಲ್ಲಿ ಸಮಸ್ಯೆ ಹೇಳಿಕೊಂಡ ಬಳಿಕ ಪ್ರಕರಣ ಬೆಳಕಿಗೆ ಬಂದಿದೆ. ಈ ಕುರಿತು ಶಹರ ಪೊಲೀಸ್ ಠಾಣೆಯಲ್ಲಿ ಪೋಕ್ಸೋ ಕಾಯ್ದೆಯಡಿ ಪ್ರಕರಣ ದಾಖಲಾಗಿದೆ. ದೂರು ದಾಖಲಾಗುತ್ತಿದ್ದಂತೆ ಆರೋಪಿ ಶಿವಪ್ಪ ತಲೆಮರಿಸಿಕೊಂಡಿದ್ದು, ಆತನ ಪತ್ತೆಗೆ ಪೊಲೀಸರು ಜಾಲ ಬೀಸಿದ್ದಾರೆ.