ಪಾರದರ್ಶಕತೆ, ವೇಗ ನಿಖರತೆಗೆ ಒತ್ತು ನೀಡಿ; ಚುನಾವಣಾಧಿಕಾರಿ ವಿ. ಅನ್ಬುಕುಮಾರ

ಸಭೆ
ಸಭೆ
Published on

ಹಾವೇರಿ: ರಾಜ್ಯದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿ ಪರಿಷ್ಕರಣೆ (ಎಸ್ಐಆರ್) ಹಿನ್ನೆಲೆಯಲ್ಲಿ ರಾಜ್ಯ ಮುಖ್ಯ ಚುನಾವಣಾಧಿಕಾರಿ ವಿ. ಅನ್ಬುಕುಮಾರ ಜಿಲ್ಲೆಗೆ ಭೇಟಿ ನೀಡಿ, ಮತದಾರರ ಪಟ್ಟಿಯ ಸಮಗ್ರ ಪರಿಷ್ಕರಣೆ ಕಾರ್ಯದ ಪ್ರಗತಿ ಕುರಿತು ಪರಿಶೀಲನೆ ನಡೆಸಿದರು.

ಶಿಗ್ಗಾಂವಿ ಪ್ರವಾಸಿ ಮಂದಿರಕ್ಕೆ ಆಗಮಿಸಿದ ಅವರು, ಜಿಲ್ಲೆಯಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿ ಪರಿಷ್ಕರಣೆ ಕಾರ್ಯವನ್ನು ಸಮಗ್ರವಾಗಿ ಅವಲೋಕಿಸಿದರು. ಹಂತ ಹಂತದ ಪ್ರಗತಿ, ಹೊಸ ಮತದಾರರ ನೋಂದಣಿ, ಹೆಸರು ತಿದ್ದುಪಡಿ, ಮೃತ ಹಾಗೂ ಸ್ಥಳಾಂತರಗೊಂಡ ಮತದಾರರ ಹೆಸರುಗಳನ್ನು ಕೈಬಿಡುವ ಪ್ರಕ್ರಿಯೆ, ಬಾಕಿ ಉಳಿದ ಅಜಿರ್ಗಳ ವಿಲೇವಾರಿ ಸೇರಿದಂತೆ ವಿವಿಧ ವಿಷಯಗಳ ಕುರಿತು ಅಧಿಕಾರಿಗಳಿಂದ ವಿವರವಾದ ಮಾಹಿತಿ ಪಡೆದರು.

ನಂತರ ಅಧಿಕಾರಿಗಳೊಂದಿಗೆ ಪ್ರಗತಿ ಪರಿಶೀಲನಾ ಸಭೆ ನಡೆಸಿ ಮಾತನಾಡಿದ ಅವರು, ಪ್ರಜಾಪ್ರಭುತ್ವ ವ್ಯವಸ್ಥೆಯಲ್ಲಿ ಮತದಾರರ ಪಟ್ಟಿ ಅತ್ಯಂತ ಪ್ರಮುಖ ದಾಖಲೆ ಆಗಿದ್ದು, ಅದು ಸಂರ್ಪೂಣ ನಿಖರ, ದೋಷರಹಿತ ಹಾಗೂ ಪಾರದರ್ಶಕವಾಗಿರುವುದು ಅತ್ಯಗತ್ಯ ಎಂದು ಹೇಳಿದರು.

ಜಿಲ್ಲಾಧಿಕಾರಿ ಡಾ. ವಿಜಯಮಹಾಂತೇಶ ದಾನಮ್ಮನವರ, ಜಿಪಂ ಸಿಇಒ ಬಲ್ಜಿತಕುಮಾರ, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಯಶೋಧಾ ವಂಟಗೋಡಿ, ಜಿಲ್ಲೆಯ ಎಲ್ಲ ಮತದಾರರ ನೋಂದಣಾಧಿಕಾರಿಗಳು, ಸಹಾಯಕ ಮತದಾರರ ನೋಂದಣಾಧಿಕಾರಿಗಳು ಹಾಗೂ ವಿವಿಧ ಇಲಾಖೆಗಳ ಹಿರಿಯ ಅಧಿಕಾರಿಗಳು ಹಾಗೂ ಚುನಾವಣಾ ವಿಭಾಗದ ಸಿಬ್ಬಂದಿ ಉಪಸ್ಥಿತರಿದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net