

ಶಿಗ್ಗಾಂವಿ: ಮಗ ಮೃತಪಟ್ಟಿದ್ದರಿಂದ ಮನನೊಂದಿದ್ದ ತಂದೆ ಕೂಡ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡ ಘಟನೆ ತಾಲೂಕಿನ ಹೊಸೂರ ಗ್ರಾಮದಲ್ಲಿ ಗುರುವಾರ ನಡೆದಿದೆ.
ಸಿದ್ದಪ್ಪ ಯಮನಪ್ಪ ತಳವಾರ (59) ಮೃತ ವ್ಯಕ್ತಿ.
ಈತನ ಪುತ್ರ ಐದಾರು ತಿಂಗಳ ಹಿಂದೆ ರಸ್ತೆ ಅಪಘಾತ ಪ್ರಕರಣದಲ್ಲಿ ಮೃತಪಟ್ಟಿದ್ದರು. ಇದರಿಂದ ಮನನೊಂದ ಸಿದ್ದಪ್ಪ ಮನೆಯಲ್ಲಿಯೆ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಈ ಕುರಿತು ತಡಸ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.