ಹೊಟ್ಟೆನೋವು ತಾಳಲಾರದೆ ವಿಷ ಸೇವಿಸಿ ವ್ಯಕ್ತಿ ಆತ್ಮಹತ್ಯೆ

Crime
Crime
Published on

ಸವಣೂರ: ಹೊಟ್ಟೆ ನೋವಿನಿಂದ ಬಳಲುತ್ತಿದ್ದ ವ್ಯಕ್ತಿಯೊಬ್ಬ ವಿಷ ಸೇವಿಸಿ ಆತ್ಮಹತ್ಯೆ ಮಾಡಿಕೊಂಡ ಘಟನೆ ತಾಲೂಕಿನ ಕಲಿವಾಳ ಗ್ರಾಮದಲ್ಲಿ ನಡೆದಿದೆ.

ಲಕ್ಷ್ಮಣ ನಾಗಪ್ಪ ಮುಂದಲಮನಿ (26) ಮೃತ ವ್ಯಕ್ತಿ.

ಈತನಿಗೆ ಹೊಟ್ಟೆ ನೋವು ಇತ್ತು. ಆಸ್ಪತ್ರೆಗೆ ತೋರಿಸಿದರೂ ಗುಣವಾಗಿರಲಿಲ್ಲ. ಇದರಿಂದ ಮನನೊಂದು ಮನೆಯಲ್ಲಿಯೆ ವಿಷ ಸೇವಿಸಿ ಆತ್ಮಹತ್ಯೆ ಮಾಡಿಕೊಂಡಿದ್ದಾನೆ. ಈ ಕುರಿತು ಸವಣೂರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net