ನೇತಾಜಿ ಆದರ್ಶ ಎಲ್ಲರಿಗೂ ಮಾದರಿ

ಹಾನಗಲ್ಲಿನಲ್ಲಿ ಶಾಸಕ ಶ್ರೀನಿವಾಸ ಮಾನೆ ಅವರ ಜನಸಂಪರ್ಕ ಕಚೇರಿಯಲ್ಲಿ ನೇತಾಜಿ ಸುಭಾಸ್‌ಚಂದ್ರ ಬೋಸ್ ಜಯಂತಿ ಆಚರಿಸಲಾಯಿತು. ಹನುಮಂತಪ್ಪ ಮರಗಡಿ, ಖ್ವಾಜಾಮೊಹಿದ್ದೀನ್ ಜಮಾದಾರ, ರಾಜಕುಮಾರ ಜೋಗಪ್ಪನವರ ಇತರರಿದ್ದರು.
ಹಾನಗಲ್ಲಿನಲ್ಲಿ ಶಾಸಕ ಶ್ರೀನಿವಾಸ ಮಾನೆ ಅವರ ಜನಸಂಪರ್ಕ ಕಚೇರಿಯಲ್ಲಿ ನೇತಾಜಿ ಸುಭಾಸ್‌ಚಂದ್ರ ಬೋಸ್ ಜಯಂತಿ ಆಚರಿಸಲಾಯಿತು. ಹನುಮಂತಪ್ಪ ಮರಗಡಿ, ಖ್ವಾಜಾಮೊಹಿದ್ದೀನ್ ಜಮಾದಾರ, ರಾಜಕುಮಾರ ಜೋಗಪ್ಪನವರ ಇತರರಿದ್ದರು.
Published on
ಹಾನಗಲ್ಲ: ನೇತಾಜಿ ಸುಭಾಸ್‌ಚಂದ್ರ ಬೋಸ್ ಅವರ ಆದರ್ಶ ಇಂದಿನ ಯುವ ಜನಾಂಗಕ್ಕೆ ಮಾದರಿ ಎಂದು ಶಾಸಕ ಶ್ರೀನಿವಾಸ ಮಾನೆ ಹೇಳಿದರು.
ಇಲ್ಲಿನ ಜನಸಂಪರ್ಕ ಕಚೇರಿಯಲ್ಲಿ ಶುಕ್ರವಾರ ನೇತಾಜಿ ಸುಭಾಸ್‌ಚಂದ್ರ ಬೋಸ್ ಜಯಂತಿ ಅಂಗವಾಗಿ ನೇತಾಜಿ ಭಾವಚಿತ್ರಕ್ಕೆ ಪುಷ್ಪನಮನ ಸಲ್ಲಿಸಿ ಅವರು ಮಾತನಾಡಿ, ನನಗೆ ರಕ್ತ ಕೊಡಿ, ನಿಮಗೆ ಸ್ವಾತಂತ್ರ್ಯ ಕೊಡುತ್ತೇನೆ ಎಂಬ ಘೋಷಣೆ ಮೊಳಗಿಸಿದ್ದ ನೇತಾಜಿ ಸುಭಾಸ್‌ಚಂದ್ರ ಬೋಸ್ ಅಪ್ರತಿಮ ಸ್ವಾತಂತ್ರ್ಯ ಹೋರಾಟಗಾರರಾಗಿದ್ದರು. ಯುವ ಸಮೂಹವನ್ನು ಸ್ವಾತಂತ್ರ್ಯ ಹೋರಾಟದಲ್ಲಿ ಸಕ್ರಿಯವಾಗಿ ಪಾಲ್ಗೊಳ್ಳಲು ಪ್ರೇರಣೆ ತುಂಬಿದ್ದರು. ದೇಶಪ್ರೇಮ ಎಂದರೆ ಕೇವಲ ಮಾತಲ್ಲ, ಅದನ್ನು ಕಾರ್ಯರೂಪದಲ್ಲಿ ತೋರಿಸಬೇಕು ಎಂದು ಬಲವಾಗಿ ನಂಬಿದ್ದರು. ನೇತಾಜಿ ಜೀವನ ನಮಗೆ ಧೈರ್ಯ, ತ್ಯಾಗ ಮತ್ತು ರಾಷ್ಟ್ರಸೇವೆಯ ಪಾಠ ಕಲಿಸುತ್ತದೆ ಎಂದರು.
ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಹನುಮಂತಪ್ಪ ಮರಗಡಿ, ಕೆಪಿಸಿಸಿ ಸದಸ್ಯ ಖ್ವಾಜಾಮೊಹಿದ್ದೀನ್ ಜಮಾದಾರ, ತಾಪಂ ಕೆಡಿಪಿ ಸದಸ್ಯ ರಾಜಕುಮಾರ ಜೋಗಪ್ಪನವರ, ಮುಖಂಡರಾದ ಈರಣ್ಣ ಬೈಲವಾಳ, ಎಂ.ಎಂ. ನೆಗಳೂರ, ರವಿ ಜಾಧವ, ರಾಜಕುಮಾರ ಶಿರಪಂಥಿ ನಾಗರಾಜ ಬಕ್ಕಣ್ಣನವರ ಇತರರಿದ್ದರು.
ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net