

ಸವಣೂರ: ಟಿಬಿ ಕಾಯಿಲೆಯಿಂದ ಬಳಲುತ್ತಿದ್ದ ಮಹಿಳೆಯೊಬ್ಬರು ಆಸ್ಪತ್ರೆಗೆ ತೋರಿಸಿದರೂ ಗುಣವಾಗದ ಕಾರಣ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡ ಘಟನೆ ಪಟ್ಟಣದ ಅಂಬೇಡ್ಕರ್ ನಗರದಲ್ಲಿ ನಡೆದಿದೆ.
ಕುಸುಮಾ ಬಸವರಾಜ ಲಕ್ಷ್ಮೇಶ್ವರ (50) ಮೃತ ಮಹಿಳೆ.
ಇವರು ಟಿಬಿ ಕಾಯಿಲೆಯಿಂದ ಬಳಲುತ್ತಿದ್ದರು. ಆಸ್ಪತ್ರೆಗೆ ತೋರಿಸಿದರೂ ಗುಣವಾಗಿರಲಿಲ್ಲ. ಇದರಿಂದ ಮನನೊಂದು ಮನೆಯಲ್ಲಿಯೆ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಈ ಕುರಿತು ಸವಣೂರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.