ಅಶ್ವಿನಿನಗರದ ಶ್ರೀ ಶಿರಡಿ ಸಾಯಿಬಾಬಾ ದೇವಸ್ಥಾನದ ಆವರಣದಲ್ಲಿ ದಿಂಗಾಲೇಶ್ವರ ಶ್ರೀಗಳು ಶ್ರೀ ಚೌಡೇಶ್ವರಿ ದೇಗುಲ ನಿರ್ಮಾಣಕ್ಕೆ ಭೂಮಿ ಪೂಜೆ ನೆರವೇರಿಸಿದರು. ಬೆಳಗ್ಗೆಯಿಂದ ಕಾಕಡಾರತಿ, ಕ್ಷೀರಾಭಿಷೇಕ, ಮಹಾಮಂಗಳಾರತಿ, ಸತ್ಯ ನಾರಾಯಣ ಪೂಜೆ, ನವಗ್ರಹ ಪೂಜೆ, ಗಣ ಹೋಮ, ದತ್ತಾತ್ರೇಯ ಹೋಮ, ರುದ್ರ ಹೋಮ, ಮಧ್ಯಾಹ್ನ ಅನ್ನಸಂತರ್ಪಣೆ ನೆರವೇರಿತು. ಸಂಜೆ ಭಜನಾ ಕಾರ್ಯಕ್ರಮ, ಶ್ರೀ ಸಾಯಿಬಾಬಾರ ಪಾಲಿಕೆ ಉತ್ಸವ, ಹುಬ್ಬಳ್ಳಿಯ ಜಯಪ್ರಿಯಾ ಆಸ್ಪತ್ರೆ ಹಾಗೂ ದೇಗುಲದ ವತಿಯಿಂದ ಉಚಿತ ನೇತ್ರ ತಪಾಸಣಾ ಶಿಬಿರ ಜರುಗಿತು.