

ರಾಣೆಬೆನ್ನೂರ: ಮಕ್ಕಳಿಂದ ಶೌಚಗೃಹ ಸ್ವಚ್ಛಗೊಳಿಸಿದ ಪ್ರಕರಣಕ್ಕೆ ಸಂಬಂಧಿಸಿ ತಾಲೂಕಿನ ಚೌಡಯ್ಯದಾನಪುರ ಗ್ರಾಮದ ಸರ್ಕಾರಿ ಪ್ರೌಢಶಾಲೆ ಮುಖ್ಯಶಿಕ್ಷಕಿಗೆ ಕ್ಷೇತ್ರ ಶಿಕ್ಷಣಾಧಿಕಾರಿ ಶ್ಯಾಮಸುಂದರ ಅಡಿಗ ನೋಟಿಸ್ ಜಾರಿ ಮಾಡಿದ್ದಾರೆ.
ಮುಖ್ಯಶಿಕ್ಷಕಿ ಮಂಜುಳಾ ಕುಲಕಣಿರ್ ಎಂಬುವರಿಗೆ ನೋಟಿಸ್ ನೀಡಿರುವುದು.
ಇವರು ಶಾಲೆಯಲ್ಲಿ ಮಕ್ಕಳಿಂದ ಶೌಚಗೃಹ ಸ್ವಚ್ಛಗೊಳಿಸಿಕೊಂಡಿದ್ದಾರೆ. ಅಲ್ಲದೆ ಇಕೊಕ್ಲಬ್ ಶೈಕ್ಷಣಿಕ ಬೇಟಿಗೆ ಮಕ್ಕಳನ್ನು ಉದ್ದೇಶಪೂರ್ವಕವಾಗಿ ಕರೆದುಕೊಂಡು ಹೋಗಿಲ್ಲ. ಆದ್ದರಿಂದ ಮುಖ್ಯಶಿಕ್ಷಕಿ ವಿರುದ್ಧ ಕಾನೂನು ಕ್ರಮ ಕೈಗೊಳ್ಳಬೇಕು ಎಂದು ಪಾಲಕರಿಂದ ದೂರು ಬಂದಿದೆ. ಆದ್ದರಿಂದ ಕಾರಣ ಕೇಳಿ ನೋಟಿಸ್ ಜಾರಿ ಮಾಡಿದ್ದು ಮೂರು ದಿನದೊಳಗೆ ನೋಟಿಸ್ಗೆ ಪ್ರತಿಕ್ರಿಯಿಸಬೇಕು ಎಂದು ನೋಟಿಸ್ನಲ್ಲಿ ತಿಳಿಸಿದ್ದಾರೆ.