ಶಿಕ್ಷಕರ ನೇಮಕಕ್ಕೆ ಆಗ್ರಹಿಸಿ ಮಕ್ಕಳು, ಗ್ರಾಮಸ್ಥರಿಂದ ಪ್ರತಿಭಟನೆ

ಪ್ರತಿಭಟನೆ
ಪ್ರತಿಭಟನೆ
Published on

ರಾಣೆಬೆನ್ನೂರು: ಗ್ರಾಮದ ಸರ್ಕಾರಿ ಶಾಲೆಗೆ ಕೂಡಲೇ ಶಿಕ್ಷಕರ ನೇಮಕ ಮಾಡಬೇಕು ಎಂದು ಆಗ್ರಹಿಸಿ ತಾಲೂಕಿನ ಚಿಕ್ಕಹರಳಹಳ್ಳಿ ಗ್ರಾಮದ ಸರ್ಕಾರಿ ಪ್ರಾಥಮಿಕ ಶಾಲೆ ಮಕ್ಕಳು, ಪಾಲಕರು ಹಾಗೂ ಗ್ರಾಮಸ್ಥರು ಬುಧವಾರ ಶಾಲೆ ಎದುರು ಪ್ರತಿಭಟನೆ ನಡೆಸಿದರು.

ಗ್ರಾಮದ ಸರ್ಕಾರಿ ಶಾಲೆಯಲ್ಲಿ ಸಮರ್ಪಕ ಸಂಖ್ಯೆಯಲ್ಲಿ ಶಿಕ್ಷಕರಿಲ್ಲದ ಕಾರಣ ವಿದ್ಯಾಥಿರ್ಗಳ ಶಿಕ್ಷಣಕ್ಕೆ ತೊಂದರೆಯಾಗುತ್ತಿದೆ. ಶಾಲೆಯಲ್ಲಿ ಖಾಲಿ ಇರುವ ಶಿಕ್ಷಕರ ಹುದ್ದೆಗಳನ್ನು ತಕ್ಷಣ ಭತಿರ್ ಮಾಡಬೇಕು ಹಾಗೂ ವಿದ್ಯಾಥಿರ್ಗಳಿಗೆ ಗುಣಮಟ್ಟದ ಶಿಕ್ಷಣ ಒದಗಿಸಲು ಅಗತ್ಯ ಕ್ರಮ ಕೈಗೊಳ್ಳಬೇಕು ಎಂದು ಆಗ್ರಹಿಸಿದರು.

ಶಾಲೆಯಲ್ಲಿ 1ರಿಂದ 8ನೇ ತರಗತಿವರೆಗೆ ಒಟ್ಟು 111 ಮಕ್ಕಳಿದ್ದಾರೆ. ಆದರೆ, ಮೂವರು ಶಿಕ್ಷಕರು ಮಾತ್ರವಿದ್ದು, ಇದೀಗ ಮತ್ತೊಬ್ಬ ಶಿಕ್ಷಕರು ನಿವೃತ್ತಿ ಹೊಂದಲಿದ್ದಾರೆ. ಹೀಗಾಗಿ ಹಲವು ತರಗತಿಗಳಿಗೆ ಶಿಕ್ಷಕರ ಕೊರತೆಯಿಂದ ಪಾಠ ಬೋಧನೆ ಸಮರ್ಪಕವಾಗಿ ನಡೆಯುತ್ತಿಲ್ಲ. ಇದರಿಂದ ಮಕ್ಕಳ ಭವಿಷ್ಯದ ಮೇಲೆ ದುಷ್ಪರಿಣಾಮ ಬೀರುತ್ತಿದೆ ಎಂದು ಆಕ್ರೋಶ ವ್ಯಕ್ತಪಡಿಸಿದರು.

ಸ್ಥಳಕ್ಕೆ ಬಂದ ಬಿಇಒ ಶ್ಯಾಮಸುಂದರ ಅಡಿಗ ಮಾತನಾಡಿ, ಇಲಾಖೆಯ ನಿಯಮಾನುಸಾರ ಶಿಕ್ಷಕರ ಕೊರತೆಯ ಸಮಸ್ಯೆ ಪರಿಹರಿಸಲು ಮೇಲಾಧಿಕಾರಿಗಳ ಗಮನಕ್ಕೆ ತಂದು ಶೀಘ್ರವಾಗಿ ಪರಿಹಾರ ಕಲ್ಪಿಸಲಾಗುವುದು. ಅಲ್ಲದೆ ಗುರುವಾರದಿಂದ ಒಬ್ಬ ಶಿಕ್ಷಕರನ್ನು ನೇಮಿಸುತ್ತೇವೆ ಎಂದು ಭರವಸೆ ನೀಡಿದರು. ನಂತರ ಪ್ರತಿಭಟನೆ ಹಿಂತೆಗೆದುಕೊಳ್ಳಲಾಯಿತು.

ಎಸ್ಡಿಎಂಸಿ ಅಧ್ಯಕ್ಷ ಶಿವಾಜಿ ನನ್ನೂರಿ, ಉಪಾಧ್ಯಕ್ಷ ಬಸವರಾಜ ಮಡಿವಾಳರ, ಸದಸ್ಯರಾದ ಮುತ್ತೇಶ ಲಮಾಣಿ, ಬಸವರಾಜ ಮೇವುಂಡಿ, ಅಜ್ಜಪ್ಪ ಲಮಾಣಿ, ವಿಜಯ ಹುಲ್ಯಾಳ, ಲಲಿತಾ ಬಜ್ಜಳ್ಳಿ, ದೇವಿರವ್ವ ಕಜ್ಜರಿ, ನಿಂಗರಾಜ ಮೇವುಂಡಿ, ಗೋಣೆಪ್ಪ ಕತ್ತೆಬೆನ್ನೂರ, ದಿನೇಶ ಬೂದಗಟ್ಟಿ, ಗ್ರಾಮಸ್ಥರಾದ ಪ್ರಕಾಶ ಶಿವಪುರ, ಲಕ್ಷ$್ಮಣ ಲಮಾಣಿ, ಸೋಮಶೇಖರ ಲಮಾಣಿ, ರಾಮಣ್ಣ ರಡ್ಡೇರ ಮತ್ತಿತರರು ಪಾಲ್ಗೊಂಡಿದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net