ಟೆಂಪೋ ಟ್ರಾವೆಲರ್ ಡಿಕ್ಕಿಯಾಗಿ ಬೈಕ್ ಸವಾರ ಸಾವು

Crime
Crime
Published on

ಹಾವೇರಿ: ಟೆಂಪೋ ಟ್ರಾವೆಲರ್ ವಾಹನ ಡಿಕ್ಕಿಯಾಗಿ ಬೈಕ್ ಸವಾರ ಮೃತಪಟ್ಟ ಘಟನೆ ತಾಲೂಕಿನ ನಾಲ್ಕರ ಕ್ರಾಸ್ ಬಳಿ ನಡೆದಿದೆ.

ಗುತ್ತಲ ಪಟ್ಟಣದ ಶಿದ್ಲಿಂಗಪ್ಪ ಕಾಗಿನೆಲ್ಲಿ ಮೃತ ಬೈಕ್ ಸವಾರ.

ಇವರು ಹರಳಹಳ್ಳಿ ಕಡೆಯಿಂದ ಗುತ್ತಲಕ್ಕೆ ಬರುತ್ತಿದ್ದ ಸಮಯದಲ್ಲಿ ಹಿಂದಿನಿಂದ ಬಂದ ಟೆಂಪೋ ಟ್ರಾವೆಲರ್ ವಾಹನ ಡಿಕ್ಕಿ ಹೊಡೆದಿದೆ. ಇದರಿಂದ ಗಂಭೀರವಾಗಿ ಗಾಯಗೊಂಡ ಶಿದ್ಲಿಂಗಪ್ಪನನ್ನು ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ, ಚಿಕಿತ್ಸೆಗೆ ಸ್ಪಂದಿಸದೆ ಮೃತಪಟ್ಟಿದ್ದಾನೆ. ಈ ಕುರಿತು ಗುತ್ತಲ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net