

ಶಿಗ್ಗಾಂವ: ಟಿಪ್ಪರ್ ಲಾರಿ ಡಿಕ್ಕಿಯಾಗಿ ಬೈಕ್ ಸವಾರ ಮೃತಪಟ್ಟ ಘಟನೆ ತಾಲೂಕಿನ ಚಿನ್ನಿಕಟ್ಟಿ ಗ್ರಾಮದ ಬಳಿ ನಡೆದಿದೆ.
ದುಂಡಸಿ ತಾಂಡಾ ನಿವಾಸಿ ರಾಮು ಮೇಗಪ್ಪ ಲಮಾಣಿ (40) ಮೃತ ಬೈಕ್ ಸವಾರ.
ಈತ ಬೈಕ್ ಮೇಲೆ ತೆರಳುತ್ತಿದ್ದ ಸಮಯದಲ್ಲಿ ಟಿಪ್ಪರ್ ಲಾರಿ ಬಂದು ಡಿಕ್ಕಿ ಹೊಡೆದಿದೆ. ಇದರಿಂದ ಗಂಭೀರವಾಗಿ ಗಾಯಗೊಂಡ ರಾಮು ಮೃತಪಟ್ಟಿದ್ದಾನೆ. ಈ ಕುರಿತು ತಡಸ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.