ಊರಲ್ಲಿ ಮಾಡಿದ ಸಾಲ ತೀರಿಸಲಾಗದೆ ಆತ್ಮಹತ್ಯೆ

Crime
Crime
Published on

ಹಾವೇರಿ: ಮದ್ಯದ ಚಟಕ್ಕೆ ಅಂಟಿಕೊಂಡ ವ್ಯಕ್ತಿಯೊಬ್ಬ ಕೈಗಡವಾಗಿ ಮಾಡಿದ್ದ ಸಾಲ ತೀರಿಸಲಾಗದೆ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡ ಘಟನೆ ತಾಲೂಕಿನ ದೇವಿಹೊಸೂರ ಗ್ರಾಮದಲ್ಲಿ ನಡೆದಿದೆ.

ನವೀನ ರಾಜೇಂದ್ರಪ್ಪ ಆಲದಕಟ್ಟಿ (28) ಮೃತ ವ್ಯಕ್ತಿ.

ಈತ ಊರಲ್ಲಿ ಸಾಲ ಮಾಡಿಕೊಂಡಿದ್ದ. ಅಲ್ಲದೆ ಮದ್ಯ ಸೇವನೆ ಚಟಕ್ಕೆ ಅಂಟಿಕೊಂಡಿದ್ದ. ಇದರಿಂದ ಹೊರಬರಲಾಗದೆ ಮನನೊಂದು ಗ್ರಾಮದ ಜಮೀನುವೊಂದರಲ್ಲಿ ಮರಕ್ಕೆ ನೇಣು ಬಿಗಿದುಕೊಂಡಿದ್ದಾನೆ. ಈ ಕುರಿತು ಗ್ರಾಮೀಣ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net