ವಿದ್ಯುತ್ ಕಂಬಕ್ಕೆ ಟ್ರ್ಯಾಕ್ಟರ್ ಡಿಕ್ಕಿ; ಕಂಬ ಮುರಿದು ಬಿದ್ದು ಚಾಲಕ ದುರ್ಮರಣ

ಚಾಲಕ
ಚಾಲಕ
Published on

ಪ್ರಮುಖ ಮುಖ್ಯಾಂಶಗಳು

  • death

ರಾಣೆಬೆನ್ನೂರ: ಟ್ರ್ಯಾಕ್ಟರ್ ಡಿಕ್ಕಿಯಾಗಿ ವಿದ್ಯುತ್ ಕಂಬ ಚಾಲಕನ ಮೈ ಮೇಲೆ ಬಿದ್ದ ಪರಿಣಾಮ ಆತ ಸ್ಥಳದಲ್ಲಿಯೆ ಮೃತಪಟ್ಟ ಘಟನೆ ತಾಲೂಕಿನ ಅಂತರವಳ್ಳಿ ಗ್ರಾಮದಲ್ಲಿ ಶುಕ್ರವಾರ ನಡೆದಿದೆ.

ಗ್ರಾಮದ ಪರಶಪ್ಪ ಲೋಕಪ್ಪ ಪೂಜಾರ (23) ಮೃತ ಯುವಕ.

ಈತ ಜಮೀನಿನಲ್ಲಿ ಟ್ರ್ಯಾಕ್ಟರ್ ಮೂಲಕ ರೂಟಾವೇಟರ್ ಹೊಡೆದು‌ ಮನೆಗೆ ವಾಪಾಸ್ ಬರುತ್ತಿದ್ದ ಸಮಯದಲ್ಲಿ ಟ್ರ್ಯಾಕ್ಟರ್ ನಿಯಂತ್ರಣ ತಪ್ಪಿ ರಸ್ತೆ ಬದಿಯ ವಿದ್ಯುತ್ ಕಂಬಕ್ಕೆ ಡಿಕ್ಕಿ ಹೊಡೆದಿದೆ. ಇದರಿಂದ ವಿದ್ಯುತ್ ಕಂಬ ಮುರಿದು ಆತನ ಮೈ ಮೇಲೆ ಬಿದ್ದಿದ್ದು ಚಾಲಕ ಸ್ಥಳದಲ್ಲಿಯೆ ಮೃತಪಟ್ಟಿದ್ದಾನೆ. ಈ ಕುರಿತು ಹಲಗೇರಿ ಪೋಲಿಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net