ಟ್ರ್ಯಾಕ್ಟರ್ ಪಲ್ಟಿಯಾಗಿ ಚಾಲಕ ಸಾವು

Crime
Crime
Published on

ಹಾನಗಲ್ಲ: ಟ್ರ್ಯಾಕ್ಟರ್ ಪಲ್ಟಿಯಾಗಿ ಬಿದ್ದು ಚಾಲಕ ಮೃತಪಟ್ಟ ಘಟನೆ ತಾಲೂಕಿನ ಅರಳೇಶ್ವರ ಗ್ರಾಮದ ಬಳಿ ನಡೆದಿದೆ.

ಪರಸನಗೌಡ ಲಕ್ಷ್ಮಣಗೌಡ ಕಲ್ಲೇಗೌಡ್ರ ಮೃತ ವ್ಯಕ್ತಿ.

ಈತ ಟ್ರ್ಯಾಕ್ಟರ್ ತೆಗೆದುಕೊಂಡು ಜಮೀನಿನ ದಾರಿಯಲ್ಲಿ ತೆರಳುತ್ತಿದ್ದ ಸಮಯದಲ್ಲಿ ಟ್ರ್ಯಾಕ್ಟರ್ ಪಲ್ಟಿಯಾಗಿ ಕೆಳಗೆ ಬಿದ್ದು ಮೃತಪಟ್ಟಿದ್ದಾನೆ. ಈ ಕುರಿತು ಆಡೂರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net