ಹುಣಸೆಮರದಿಂದ ಬಿದ್ದು ವ್ಯಕ್ತಿ ಸಾವು

Crime
Crime
Published on

ಬ್ಯಾಡಗಿ: ಹುಣಸೆ ಮರದಿಂದ ಕೆಳಗೆ ಬಿದ್ದು ವ್ಯಕ್ತಿನೊಬ್ಬ ಮೃತಪಟ್ಟ ಘಟನೆ ತಾಲೂಕಿನ ಮೋಟೆಬೆನ್ನೂರ ಬಳಿ ನಡೆದಿದೆ.

ತಾಲೂಕಿನ ಶಿವಪೂರ ತಾಂಡಾದ ಶಂಕ್ರಪ್ಪ ಸೀನಪ್ಪ ಲಮಾಣಿ (35) ಮೃತ ವ್ಯಕ್ತಿ.

ಈತ ಹುಣಸೆಮರದಲ್ಲಿ ಹುಣಸೆಹಣ್ಣು ಹರಿಯುತ್ತಿದ್ದ ಸಮಯದಲ್ಲಿ ಆಕಸ್ಮಿಕವಾಗಿ ಕಾಲು ಜಾರಿ ಕೆಳಗೆ ಬಿದ್ದಿದ್ದಾನೆ. ಇದರಿಂದ ತಲೆಗೆ ಬಲವಾದ ಪೆಟ್ಟು ಬಿದ್ದು ಮೃತಪಟ್ಟಿದ್ದಾನೆ. ಈ ಕುರಿತು ಬ್ಯಾಡಗಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net