

ರಾಣೆಬೆನ್ನೂರ: ತುಂಗಭದ್ರಾ ನದಿಯಲ್ಲಿ ನೀರು ಕುಡಿಯಲು ಹೋದ ವ್ಯಕ್ತಿಯೊಬ್ಬ ಕಾಲು ಜಾರಿ ಬಿದ್ದು ಮೃತಪಟ್ಟ ಘಟನೆ ತಾಲೂಕಿನ ಹರನಗಿರಿ ಗ್ರಾಮದ ಬಳಿ ನಡೆದಿದೆ.
ವಿಜಯನಗರ ಜಿಲ್ಲೆ ಹೂವಿನಹಡಗಲಿ ತಾಲೂಕಿನ ಹರವಿ ಗ್ರಾಮದ ಕುಮಾರ ಸೋಮಲಿಂಗಪ್ಪ ಯಲ್ಲಮ್ಮಣ್ಣನವರ ಮೃತ ವ್ಯಕ್ತಿ.
ಈತ ನೀರು ಕುಡಿಯುವ ಸಲುವಾಗಿ ನದಿಪಾತ್ರಕ್ಕೆ ಹೋದಾಗ ಕಾಲು ಜಾರಿ ಬಿದ್ದು ಮೃತಪಟ್ಟಿದ್ದಾನೆ. ಈ ಕುರಿತು ಗ್ರಾಮೀಣ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.