

ರಟ್ಟಿಹಳ್ಳಿ: ಅಕ್ರಮವಾಗಿ ಗೋ ಸಾಗಾಟ ಮಾಡುತ್ತಿದ್ದ ವಾಹನದ ಮೇಲೆ ದಾಳಿ ಮಾಡಿದ ಪೊಲೀಸರು ಇಬ್ಬರನ್ನು ಬಂಧಿಸಿ ಮೂವರು ಆಕಳುಗಳನ್ನು ರಕ್ಷಣೆ ಮಾಡಿದ್ದಾರೆ.
ತಾಲೂಕಿನ ಕಣವಿಸಿದ್ದಗೇರಿ ಗ್ರಾಮದ ಮಹ್ಮದಲಿ ಸವನೂರ ಹಾಗೂ ಮಂಜು ಕಣಿವೆಪ್ಪ ಕೆಂಗಣ್ಣನವರ ಬಂಧಿತರು.
ಇವರು ಅಶೋಕ ಲೈಲ್ಯಾಂಡ್ ವಾಹನದಲ್ಲಿ ಅಕ್ರಮವಾಗಿ ಗೋ ಸಾಗಾಟ ಮಾಡುತ್ತಿದ್ದರು. ಈ ಕುರಿತು ಖಚಿತ ಮಾಹಿತಿ ಮೇರೆಗೆ ದಾಳಿ ನಡೆಸಿದ ಪೊಲೀಸರು ಗೋವುಗಳನ್ನು ರಕ್ಷಿಸಿದ್ದಾರೆ. ಈ ಕುರಿತು ರಟ್ಟಿಹಳ್ಳಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.