VB Ji Ram Ji ಗ್ರಾಮೀಣ ಆಥಿರ್ಕತೆಗೆ ವಿಬಿ ಜಿ ರಾಮ್​ ಜಿ ಹೊಸ ಶಕ್ತಿ

ಹಿರೇಕೆರೂರ ತಾಲೂಕಿನ ಚಿನ್ನಮುಳಗುಂದ ಗ್ರಾಮದಲ್ಲಿ ಏರ್ಪಡಿಸಿದ್ದ ವಿಬಿ ಜಿ ರಾಮ್​ ಜಿ VB Ji Ram Ji ಜನಜಾಗೃತಿ ಅಭಿಯಾನ ಕುರಿತು ಮಾಜಿ ಸಚಿವ ಬಿ.ಸಿ. ಪಾಟೀಲ ಮಾತನಾಡಿದರು.
ಹಿರೇಕೆರೂರ ತಾಲೂಕಿನ ಚಿನ್ನಮುಳಗುಂದ ಗ್ರಾಮದಲ್ಲಿ ಏರ್ಪಡಿಸಿದ್ದ ವಿಬಿ ಜಿ ರಾಮ್​ ಜಿ VB Ji Ram Ji ಜನಜಾಗೃತಿ ಅಭಿಯಾನ ಕುರಿತು ಮಾಜಿ ಸಚಿವ ಬಿ.ಸಿ. ಪಾಟೀಲ ಮಾತನಾಡಿದರು.
Published on
ಹಿರೇಕೆರೂರ: ಈ ಮೊದಲು ಜಾರಿಯಲ್ಲಿದ್ದ ಉದ್ಯೋಗ ಖಾತ್ರಿ ಯೋಜನೆ ಕೇಂದ್ರ ಸರ್ಕಾರ ನ್ಯೂನತೆಗಳನ್ನು ಸರಿಪಡಿಸಿ ವಿಬಿ ಜಿ ರಾಮ್​ ಜಿ VB Ji Ram Ji ಕಾಯ್ದೆ ಜಾರಿಗೆ ತಂದಿದೆ. ಇದರಿಂದ ಗ್ರಾಮೀಣ ಭಾಗದ ಆಥಿರ್ಕತೆಗೆ ಹೊಸ ಶಕ್ತಿ ತುಂಬಲಿದೆ ಎಂದು ಮಾಜಿ ಸಚಿವ ಬಿ.ಸಿ. ಪಾಟೀಲ ಹೇಳಿದರು.
ಕೇಂದ್ರ ಸರ್ಕಾರದ ನೂತನ ವಿಬಿ&ಜಿ ರಾಮ್​ ಜಿ ಯೋಜನೆಯ ಕುರಿತು ತಾಲೂಕಿನ ಚಿನ್ನಮುಳಗುಂದ ಗ್ರಾಮದಲ್ಲಿ ತಾಲೂಕು ಬಿಜೆಪಿ ಮಂಡಲದ ವತಿಯಿಂದ ಇತ್ತೀಚೆಗೆ ಏರ್ಪಡಿಸಿದ್ದ ಜಾಗೃತಿ ಅಭಿಯಾನಕ್ಕೆ ಚಾಲನೆ ನೀಡಿ ಅವರು ಮಾತನಾಡಿದರು.
ವರ್ಷಕ್ಕೆ 125 ದಿನಗಳ ಉದ್ಯೋಗ ಖಾತ್ರಿ ನೀಡುವುದು ಮತ್ತು ಕೃಷಿ ಹಂಗಾಮಿನಲ್ಲಿ ರೈತರಿಗೆ, ಕಾಮಿರ್ಕರಿಗೆ ವ್ಯವಸ್ಥೆ ಮಾಡಿರುವುದು ನಿಜಕ್ಕೂ ರೈತಪರ ಕಾಳಜಿಯಾಗಿದೆ. ಭ್ರಷ್ಟಾಚಾರವನ್ನು ತೆಗೆದು ಹಾಕಿ ಹಳ್ಳಿಗಳಲ್ಲಿ ಶಾಶ್ವತ ಅಭಿವೃದ್ಧಿ ತರುವ ಈ ಕಾಯ್ದೆಯ ಬಗ್ಗೆ ಜನಸಾಮಾನ್ಯರಲ್ಲಿ ಅರಿವು ಮೂಡಿಸುವುದು ನಮ್ಮೆಲ್ಲರ ಜವಾಬ್ದಾರಿಯಾಗಿದೆ.
ಈ ಯೋಜನೆ ಬಗ್ಗೆ ರಾಜ್ಯ ಸರ್ಕಾರ ಸುಳ್ಳು ಹೇಳಿ ಬಡವರ ದಾರಿ ತಪ್ಪಿಸುತ್ತಿದೆ. ಹಿಂದಿನ ನರೇಗಾ ಯೋಜನೆಯಲ್ಲಿ ಪ್ರತಿ ವರ್ಷ 100 ದಿನಗಳ ಉದ್ಯೋಗ ಖಾತ್ರಿ ಇತ್ತು. ಈಗ 125 ದಿನಗಳಿಗೆ ವಿಸ್ತರಣೆ ಮಾಡಿದೆ. 125 ದಿನಗಳನ್ನು ಗ್ರಾಮ ಪಂಚಾಯಿತಿಗಳೇ ನಿರ್ಧಾರ ಮಾಡಬಹುದು. ಆದರೆ, ಕೇಂದ್ರ ಸರ್ಕಾರ ನಿರ್ಧಾರ ಮಾಡುತ್ತಿದೆ ಎಂಬ ಭೀತಿಯನ್ನು ಈಗಿನ ರಾಜ್ಯ ಸರ್ಕಾರ ಕಾಮಿರ್ಕರಲ್ಲಿ ತಪ್ಪು ತಿಳಿವಳಿಕೆಯನ್ನು ಹುಟ್ಟಿಸುತ್ತಿದೆ ಎಂದರು.
ನರೇಗಾ ಯೋಜನೆಯಲ್ಲಿ ಹಲವಾರು ಪ್ರಕರಣಗಳು ಭ್ರಷ್ಟಾಚಾರದಿಂದ ಕೂಡಿರುವುದು, ಯೋಜನೆಗಳ ರ್ದುಬಳಕೆ ಆಗಿರುವುದು ಎಲ್ಲರಿಗೂ ಗೊತ್ತಿರುವ ಸಂಗತಿಯಾಗಿದೆ. ಕೂಲಿಕಾರರ ಹೆಸರು ಹೇಳಿ ವೇತನ ತೆಗೆದಿರುವ ಲೋಪವಿದ್ದು, ಇದನ್ನು ಸರಿಪಡಿಸಲು ಬಯೋಮೆಟ್ರಿಕ್​ ತಂತ್ರಜ್ಞಾನ ಬಳಸಿ ಸೋರಿಕೆ ತಡೆಗಟ್ಟಲು ಈ ಯೋಜನೆ ಮಾಡಿದರೆ, ಇದರಿಂದ ವಂಚನೆ ಆಗುತ್ತದೆ ಎಂದು ಸುಳ್ಳನ್ನು ರಾಜ್ಯ ಸರ್ಕಾರ ಹೇಳುತ್ತಿದೆ ಎಂದರು.
ತಾಲೂಕು ಬಿಜೆಪಿ ಮಂಡಲದ ಅಧ್ಯ ಸಂಜೀವಯ್ಯ ಕಬ್ಬಿಣಕಂತಿಮಠ, ವಿಬಿ ಜಿ&ರಾಮ್​ ಜಿ ಯೋಜನೆ ಸಂಚಾಲಕ ಜಿ.ಪಿ.ಪ್ರಕಾಶಗೌಡ, ಜಿಪಂ ಮಾಜಿ ಸದಸ್ಯ ಬಿ.ಎನ್​. ಬಣಕಾರ, ಕೆಸಿಸಿ ಬ್ಯಾಂಕ್​ ನಿರ್ದೇಶಕ ರವಿಶಂಕರ ಬಾಳಿಕಾಯಿ, ದೇವೇಂದ್ರಪ್ಪ ದೊಡ್ಡಾರೇರ, ಹನುಮಂತಪ್ಪ ಗಾಳೇವರ ಇದ್ದರು.
ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net