ಪತ್ನಿ ಮನೆ ಬಿಟ್ಟು ಹೋಗಿದ್ದರಿಂದ ಪತಿ ಆತ್ಮಹತ್ಯೆ

Crime
Crime
Published on

ಸವಣೂರ: ಪತ್ನಿ ಮನೆ ಬಿಟ್ಟು ಹೋಗಿದ್ದನ್ನು ಮನಸ್ಸಿಗೆ ಹಚ್ಚಿಕೊಂಡ ಪತಿ ವಿಷ ಸೇವಿಸಿ ಆತ್ಮಹತ್ಯೆ ಮಾಡಿಕೊಂಡ ಘಟನೆ ತಾಲೂಕಿನ ಹೂವಿನಶಿಗ್ಲಿ ಗ್ರಾಮದಲ್ಲಿ ನಡೆದಿದೆ.

ಶರಣಪ್ಪ ರಾಮಣ್ಣ ರಾಯಮ್ಮನವರ (30) ಮೃತ ವ್ಯಕ್ತಿ.

ಈತ ಸಾಲ ಮಾಡಿಕೊಂಡಿದ್ದ. ಅಲ್ಲದೆ ಪತ್ನಿ ಕೂಡ ಮನೆ ಬಿಟ್ಟು ಹೋಗಿದ್ದಳು. ಇದರಿಂದ ಬೇಸರ ಮಾಡಿಕೊಂಡು ಜಮೀನಿನಲ್ಲಿ ವಿಷ ಸೇವಿಸಿ ಆತ್ಮಹತ್ಯೆ ಮಾಡಿಕೊಂಡಿದ್ದಾನೆ. ಈ ಕುರಿತು ಸವಣೂರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net