ಅಪಾಯಕಾರಿ ಟ್ರಾನ್ಸ್‌ಫಾರ್ಮರ್ ಸ್ಥಳಾಂತರ : ಶಾಸಕರ ಸೂಚನೆಗೆ ಸ್ಪಂದಿಸಿದ ಮೆಸ್ಕಾಂ ಇಲಾಖೆ

transformer
ಬಡಗನ್ನೂರು ಗ್ರಾಮ ಪಂಚಾಯಿತಿ ವ್ಯಾಪ್ತಿಯ ಪೆರಿಗೇರಿಯ ಜನ ವಸತಿ ಪ್ರದೇಶದಲ್ಲಿ ಅಪಾಯಕಾರಿ ಸ್ಥಿತಿಯಲ್ಲಿದ್ದ ವಿದ್ಯುತ್ ಟ್ರಾನ್ಸ್‌ಫಾರ್ಮರನ್ನು ಶಾಸಕರ ಸೂಚನೆ ಮೇರೆಗೆ ಮೆಸ್ಕಾಂ ಇಲಾಖೆಯವರು ಸ್ಥಳಾಂತರ ಮಾಡಿದ್ದಾರೆ.
Published on

ಪುತ್ತೂರು ಗ್ರಾಮಾಂತರ: ಬಡಗನ್ನೂರು ಗ್ರಾಮ ಪಂಚಾಯಿತಿ ವ್ಯಾಪ್ತಿಯ ಪೆರಿಗೇರಿಯ ಜನವಸತಿ ಪ್ರದೇಶದಲ್ಲಿ ಅಪಾಯಕಾರಿ ಸ್ಥಿತಿಯಲ್ಲಿದ್ದ ವಿದ್ಯುತ್ ಟ್ರಾನ್ಸ್‌ಫಾರ್ಮರನ್ನು ಶಾಸಕರ ಸೂಚನೆ ಮೇರೆಗೆ ಮೆಸ್ಕಾಂ ಇಲಾಖೆಯವರು ಸ್ಥಳಾಂತರ ಮಾಡಿದ್ದಾರೆ.

ಪೆರಿಗೇರಿಯ ಜನವಸತಿ ಪ್ರದೇಶದಲ್ಲಿ ಅರೇಬಿಕ್ ಶಾಲೆಯ ಬಳಿಯಿದ್ದ ವಿದ್ಯುತ್ ಟ್ರಾನ್ಸ್‌ಫಾರ್ಮರ್ ಅಪಾಯಕಾರಿ ಸ್ಥಿತಿಯಲ್ಲಿತ್ತು. ಹಳೆಯ ವಿದ್ಯುತ್ ಕಂಬದಲ್ಲಿ ಟ್ರಾನ್ಸ್‌ಫಾರ್ಮರ್ ಜೋಡಣೆ ಮಾಡಿರುವ ಕಾರಣ ಅಪಾಯ ಸಂಭವಿಸುವ ಸಾಧ್ಯತೆ ಹೆಚ್ಚಾಗಿರುವುದರಿಂದ ಅದನ್ನು ಅಲ್ಲಿಂದ ಸ್ಥಳಾಂತರ ಮಾಡುವಂತೆ ಆಗ್ರಹಿಸಿ ಸ್ಥಳೀಯರು ಶಾಸಕ ಅಶೋಕ್‌ಕುಮಾರ್ ರೈಗೆ ಮನವಿ ಮಾಡಿಕೊಂಡಿದ್ದರು.

ಮನವಿಗೆ ಸ್ಪಂದಿಸಿದ ಶಾಸಕರು, ಅಪಾಯಕಾರಿ ಸ್ಥಿತಿಯಲ್ಲಿರುವ ಟ್ರಾನ್ಸ್‌ಫಾರ್ಮರ್ ಸ್ಥಳಾಂತರ ಮಾಡಿ ಸುರಕ್ಷಿತ ಸ್ಥಳದಲ್ಲಿ ಅಳವಡಿಸುವಂತೆ ಮೆಸ್ಕಾಂ ಅಧಿಕಾರಿಗಳಿಗೆ ಸೂಚನೆ ನೀಡಿದ್ದರು. ಶಾಸಕರ ಸೂಚನೆಯಂತೆ ಮೆಸ್ಕಾಂ ಇಲಾಖೆಯವರು ಅಪಾಯಕಾರಿ ಸ್ಥಿತಿಯಲ್ಲಿದ್ದ ವಿದ್ಯುತ್ ಟ್ರಾನ್ಸ್‌ಫಾರ್ಮರನ್ನು ತೆರವುಗೊಳಿಸಿ, ಸಮೀಪದ ಸುರಕ್ಷಿತ ಸ್ಥಳದಲ್ಲಿ ಹೊಸ ವಿದ್ಯುತ್ ಕಂಬಗಳನ್ನು ಅಳವಡಿಸಿ ಅಲ್ಲಿಗೆ ಸ್ಥಳಾಂತರ ಮಾಡಿದ್ದಾರೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net