ಮುಖ್ಯಮಂತ್ರಿಯಾಗಿ ಸಿದ್ದರಾಮಯ್ಯನವರೇ ಮುಂದುವರೆಯಲಿದ್ದಾರೆ: ಎಚ್​.ಸಿ.ಮಹದೇವಪ್ಪ

Siddaramaiah Mahadevappa
Published on

ಮೈಸೂರು: ಸಿದ್ದರಾಮಯ್ಯನವರು ರಾಜ್ಯದ ಮುಖ್ಯಮಂತ್ರಿಯಾಗಿದ್ದಾರೆ. ಅವರೇ ಮುಂದುವರೆಯಲಿದ್ದಾರೆ ಎಂದು ಸಮಾಜ ಕಲ್ಯಾಣ ಇಲಾಖೆ ಸಚಿವ ಎಚ್.ಸಿ.ಮಹದೇವಪ್ಪ ಹೊಸ ಬಾಂಬ್​ ಒಂದನ್ನು ಸಿಡಿಸಿದ್ದಾರೆ.

ಈ ಕುರಿತು ಮಾತನಾಡಿದ ಸಚಿವ ಎಚ್​.ಸಿ.ಮಹದೇವಪ್ಪ ಅಧಿಕಾರಿ ಹಂಚಿಕೆ ಕುರಿತ ಪ್ರಶ್ನೆಗೆ ಪ್ರತಿಕ್ರಿಯಿಸಿ ಸಿದ್ದರಾಮಯ್ಯ ಮುಖ್ಯಮಂತ್ರಿ ಎನ್ನುವುದರ ಬಗ್ಗೆ ಮಾತ್ರ ಚರ್ಚೆಯಾಗಿದೆ ಎಂದು ತಿಳಿಸಿದ್ದಾರೆ.

ದಲಿತರಿಗೆ ಮುಖ್ಯಮಂತ್ರಿ ಸ್ಥಾನ ಸಿಗುವ ಕುರಿತು ಪ್ರತಿಕ್ರಿಯಿಸಿ ಗೃಹ ಸಚಿವ ಪರಮೇಶ್ವರ್​ ಹೇಳಿರುವುದರಲ್ಲಿ ತಪ್ಪೇನಿಲ್ಲ. ತುಳಿತಕ್ಕೆ ಒಳಗಾದವರಿಗೆ ಅವಾಕಶ ದೊರೆಯಬೇಕು. ನನಗೂ ಮುಖ್ಯಮಂತ್ರಿ ಆಗುವ ಆಸೆ ಇದೆ ಎಂದು ಪರೋಕ್ಷವಾಗಿ ತಾವು ಸಿಎಂ ಸ್ಥಾನದ ಆಕಾಂಕ್ಷಿ ಎಂದು ಹೇಳಿದ್ದಾರೆ.

Indira Canteen
ಸಾಂದರ್ಭಿಕ ಚಿತ್ರ

ಮಾಂಸಹಾರಕ್ಕೆ ಅವಕಾಶ

ಮುಚ್ಚಿರುವ ಎಲ್ಲಾ ಇಂದಿರಾ ಕ್ಯಾಂಟೀನ್ಗಳನ್ನು ತೆರೆಯುವುದು ನಮ್ಮ ಸದ್ಯದ ಉದ್ಧೇಶವಾಗಿದೆ. ಅಲ್ಲಿ ಮಾಂಸಹಾರ ನೀಡುವ ಬಗ್ಗೆ ಪ್ರಸ್ತಾವನೆ ಸಲ್ಲಿಕೆಯಾಗಿಲ್ಲ ಬೇಕಿದ್ದರೆ ಅಲ್ಲಿಗೆ ತಂದು ತಿನ್ನಬಹುದು ಎಂದು ಪ್ರತಿಕ್ರಿಯಿಸಿದ್ದಾರೆ.

ರಾಜ್ಯದಲ್ಲಿ ಕಾಂಗ್ರೆಸ್‌ ಸರ್ಕಾರದಿಂದ ಬಡಜನರು ಹಾಗೂ ಕಾರ್ಮಿಕರಿಗೆ ಅನುಕೂಲವಾಗುವಂತೆ ಸ್ಥಾಪಿಸಲಾಗಿರುವ ಇಂದಿರಾ ಕ್ಯಾಂಟೀನ್‌ಅನ್ನು ಮತ್ತಷ್ಟು ವಿಸ್ತರಿಸುವ ಕುರಿತು ಚರ್ಚೆ ನಡೆಯುತ್ತಿದ್ದು, ಮಾಂಸಾಹಾರ ನೀಡುವ ಬಗ್ಗೆ ಸದ್ಯಕ್ಕೆ ಚಿಂತನೆ ಇಲ್ಲ ಎಂದು ತಿಳಿಸಿದ್ದಾರೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net