ಮಗ, ಮೊಮ್ಮಗನದ್ದೇ ಚಿಂತೆ; ದೇವೇಗೌಡರ ಆರೋಗ್ಯದಲ್ಲಿ ಏರುಪೇರು, ​ಆತಂಕದಲ್ಲಿ ಕುಟುಂಬ

HD Devegowda
Published on

ಬೆಂಗಳೂರು: ಮಾಜಿ ಪ್ರಧಾನಿ ಎಚ್.ಡಿ ದೇವೇಗೌಡರು, ವಯೋಸಹಜ ಆರೋಗ್ಯ ಸಮಸ್ಯೆಗಳಿಂದ ಬಳಲುತ್ತಿದ್ದಾರೆ. ಹಿರಿಮಗ ಹಾಗೂ ಮೊಮ್ಮಗನ ಹಗರಣಗಳಿಂದಾಗಿ ತೀವ್ರವಾಗಿ ನೊಂದಿದ್ದಾರೆ. ಆರೋಗ್ಯದಲ್ಲಿ ಏರುಪೇರು ಉಂಟಾಗಿದೆ ಎಂದು ತಿಳಿದುಬಂದಿದೆ.

ದೇವೇಗೌಡರ ಆರೋಗ್ಯದಲ್ಲಿ ಏರುಪೇರು ಉಂಟಾಗಿದೆ ಎಂದು ತಿಳಿದುಬಂದಿದೆ. ಹೀಗಾಗಿ ದೇವೇಗೌಡ ಕುಟುಂಬದ ಸದಸ್ಯರು ಅಲರ್ಟ್‌ ಆಗಿದ್ದು, ತೀವ್ರ ನಿಗಾ ಇರಿಸಿದ್ದಾರೆ.

ವಯೋಸಹಜ ಆರೋಗ್ಯ ಸಮಸ್ಯೆಗಳಿಂದ ಬಳಲುತ್ತಿರುವ ಮಾಜಿ ಪ್ರಧಾನಿ ಎಚ್.ಡಿ ದೇವೇಗೌಡರು, ಮೊಮ್ಮಗ, ಹಾಸನ ಸಂಸದ  ಪ್ರಜ್ವಲ್ ರೇವಣ್ಣ  ಪೆನ್ ಡ್ರೈವ್ ಪ್ರಕರಣ  ಉಂಟುಮಾಡಿರುವ ಚಿಂತೆ ಉಂಟು ಮಾಡಿದೆ.  ಈ ಹಿನ್ನೆಲೆಯಲ್ಲಿ ದೇವೇಗೌಡರು ಹಾಗೂ ಪತ್ನಿ ಚೆನ್ನಮ್ಮ ಆರೋಗ್ಯದ ಬಗ್ಗೆಯೂ ಕುಟುಂಬದ ಸದಸ್ಯರು ತೀವ್ರ ನಿಗಾ ವಹಿಸುತ್ತಿದ್ದಾರೆ.

ಹೆಣ್ಣು ಮಕ್ಕಳು ಸಂಪೂರ್ಣ ಮೇಲ್ವಿಚಾರಣೆ ಹೊತ್ತಿದ್ದಾರೆ. ಬೆಳಿಗ್ಗೆ ಹಾಗೂ ಸಂಜೆ ಎರಡೂ ಟೈಮ್ ಆರೋಗ್ಯ ತಪಾಸಣೆ ನಡೆಸುತ್ತಿದ್ದಾರೆ. “ಟಿವಿ ನೋಡಬೇಡಿ.. ಸಂಪೂರ್ಣ ರೆಸ್ಟ್ ಮಾಡಿ” ಎಂದು ದೇವೇಗೌಡರಿಗೆ ವೈದ್ಯರು ಕೂಡ ಸಲಹೆ ನೀಡಿದ್ದಾರೆ. ದೇವೇಗೌಡರ ಕೋಣೆಯಲ್ಲಿ ಒಬ್ಬ ವ್ಯಕ್ತಿಯನ್ನು ಸದಾ ನೋಡಿಕೊಳ್ಳಲು ಇರಿಸಿದ್ದಾರೆ ಎನ್ನಲಾಗಿದೆ.

ಹೃದಯ ತಜ್ಞ ಡಾ. ಸಿ.ಎನ್‌ ಮಂಜುನಾಥ್ ಗೌಡರ ಮನೆಗೆ ಭೇಟಿ ನೀಡಿ ನಿಯಮಿತ ತಪಾಸಣೆ ನಡೆಸಿದ್ದಾರೆ. ಇತರ ನುರಿತ ವೈದ್ಯರಿಂದಲೂ ತಪಾಸಣೆ ನಡೆದಿದೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net