92ರ ಹುಟ್ಟುಹಬ್ಬದ ಸಂಭ್ರಮದಲ್ಲಿ ಎಚ್​ಡಿಡಿ; ಮಾಜಿ ಪ್ರಧಾನಿಗೆ ಹಲಸಿನ ಹಣ್ಣು ಗಿಫ್ಟ್‌ ಕೊಟ್ಟ ಕಾರ್ಯಕರ್ತ

hdd
Published on

ಬೆಂಗಳೂರು: ಮಾಜಿ ಪ್ರಧಾನಿ ಎಚ್‌ಡಿ ದೇವೇಗೌಡರು ಇಂದು 92ನೇ ಹುಟ್ಟುಹಬ್ಬ ಆಚರಿಸಿಕೊಂಡಿದ್ದಾರೆ. ಪಕ್ಷದ ಕಾರ್ಯಕರ್ತನೊಬ್ಬ ತನ್ನ ನೆಚ್ಚಿನ ನಾಯಕನಿಗೆ ಹಲಸಿನ ಹಣ್ಣನ್ನು ಉಡುಗೊರೆಯಾಗಿ ನೀಡಿದ್ದಾನೆ.

ಪ್ರಧಾನಿ ನರೇಂದ್ರ ಮೋದಿ ಅವರು ದೇವೇಗೌಡರಿಗೆ ಶುಭಾಶಯ ಕೋರಿದ್ದಾರೆ. ಈ ವೇಳೆ ಪಕ್ಷದ ಕಾರ್ಯಕರ್ತನೊಬ್ಬ ತನ್ನ ನೆಚ್ಚಿನ ನಾಯಕನಿಗೆ ಹಲಸಿನ ಹಣ್ಣನ್ನು ಉಡುಗೊರೆಯಾಗಿ ನೀಡಿದ್ದಾನೆ. ದೇವೇಗೌಡರು ಅದರ ಪರಿಮಳವನ್ನು ಆಸ್ವಾದಿಸಿ ಖುಷಿಪಟ್ಟರು. ಪ್ರೀತಿಪೂರ್ವಕವಾಗಿ, ಖುಷಿ ಖುಷಿಯಿಂದ ದೇವೇಗೌಡ ಅವರು ಸ್ವೀಕರಿಸಿದರು. ಅಲ್ಲದೆ, ಆ ಹಲಸಿನ ಹಣ್ಣಿನ ಬಳಿಗೆ ತಮ್ಮ ಮೂಗನ್ನು ಇಟ್ಟು ಅದರ ಪರಿಮಳವನ್ನು ಆಸ್ವಾದಿಸಿದರು. ಕಾರ್ಯಕರ್ತನ ಗಿಫ್ಟ್‌ ಬಗ್ಗೆ ಬಹಳವೇ ಖುಷಿಪಟ್ಟರು.

ಎಚ್‌.ಡಿ. ದೇವೇಗೌಡರ ಹುಟ್ಟುಹಬ್ಬಕ್ಕೆ ಸೋಷಿಯಲ್‌ ಮೀಡಿಯಾ ಎಕ್ಸ್‌ ಮೂಲಕ ಶುಭ ಕೋರಿದ ಪ್ರಧಾನಿ ನರೇಂದ್ರ ಮೋದಿ, ದೇಶಕ್ಕೆ ದೇವೇಗೌಡ ಸೇವೆ ಗಣನೀಯವಾಗಿದ್ದು, ರಾಜಕೀಯ ವಲಯದಲ್ಲಿ ಅವರನ್ನು ಗೌರವದಿಂದ ಕಾಣಲಾಗುತ್ತದೆ. ಕೃಷಿ ಮತ್ತು ಗ್ರಾಮೀಣಾಭಿವೃದ್ಧಿಯಲ್ಲಿ ಅವರ ಆಸಕ್ತಿ ಗಮನಾರ್ಹವಾಗಿದೆ. ಅವರ ದೀರ್ಘ ಮತ್ತು ಆರೋಗ್ಯಕರ ಜೀವನಕ್ಕಾಗಿ ಭಗವಂತನಲ್ಲಿ ಪ್ರಾರ್ಥಿಸುತ್ತೇನೆ ಎಂದು ಪೋಸ್ಟ್‌ ಮಾಡಿದ್ದಾರೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net