ಎಚ್ ಡಿ ದೇವೇಗೌಡರ ಪತ್ನಿ ಚೆನ್ನಮ್ಮ ಆಸ್ಪತ್ರೆಗೆ ದಾಖಲು / HD Deve Gowda Wife Chennamma Hospitalized

HD Deve Gowda Wife Chennamma
Published on

ಬೆಂಗಳೂರು: ಮಾಜಿ ಪ್ರಧಾನಿ ಎಚ್ ಡಿ ದೇವೇಗೌಡರ ಪತ್ನಿ ಚೆನ್ನಮ್ಮ ( HD Deve Gowda Wife Chennamma Hospitalized ) ಅವರಿಗೆ ದಿಢೀರ್ ಅನಾರೋಗ್ಯದ ಹಿನ್ನೆಲೆ   ಬೆಂಗಳೂರಿನ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ.

ತೀವ್ರ ಉಸಿರಾಟದ ತೊಂದರೆ ಹಿನ್ನೆಲೆಯಲ್ಲಿ ಖಾಸಗಿ ಆಸ್ಪತ್ರೆಗೆ ದಾಖಲೆಯಾಗಿದ್ದು, ಚಿಕಿತ್ಸೆ ನೀಡಲಾಗುತ್ತಿದೆ. ಚೆನ್ನಮ್ಮ ಆಸ್ಪತ್ರೆಗೆ ದಾಖಲಾಗಿರುವ ಹಿನ್ನೆಲೆ ಚೆನ್ನಮ್ಮ ಆರೋಗ್ಯ ವಿಚಾರಿಸಲು ಕುಟುಂಬ ಸದ್ಯಸ್ಯರು ಆಸ್ಪತ್ರೆಗೆ ದೌಡಾಯಿಸಿದ್ದಾರೆ.

ಮಾಜಿ ಮುಖ್ಯಮಂತ್ರಿ ಹಾಗೂ ಕೇಂದ್ರ ಸಚಿವ ಹೆಚ್‌ ಡಿ ಕುಮಾರಸ್ವಾಮಿ ಹಾಗೂ ಅವರ ಪತ್ನಿ ಅನಿತಾ ಕುಮಾರಸ್ವಾಮಿ ಆಸ್ಪತ್ರೆಗೆ ದೌಡಾಯಿಸಿದ್ದಾರೆ. ಚನ್ನಪಟ್ಟಣ ಟಿಕೆಟ್ ವಿಚಾರವಾಗಿ ಸಭೆ ನಡೆಸಬೇಕಿತ್ತು ಆದರೆ, ಚೆನ್ನಮ್ಮ ಅವರ ಅನಾರೋಗ್ಯ ಹಿನ್ನೆಲೆ ಸಭೆ ರದ್ದುಗೊಳಿಸಿದ್ದಾರೆ ಎನ್ನಲಾಗಿದೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net