ರೈತರ ನೆರವಿಗೆ ಧಾವಿಸಲು ಸರ್ಕಾರಕ್ಕೆ ಎಚ್​ಡಿಕೆ ಆಗ್ರಹ

HDK 18 Feb 20
Published on

ಬೆಂಗಳೂರು: ರೈತರಿಂದ ಉತ್ಪನ್ನಗಳನ್ನು ಸರ್ಕಾರವೇ ಮುಂದೆ ನಿಂತು ಖರೀದಿಸಿ, ಮಾರಾಟ ಮಾಡಬೇಕು ಎಂದು ಮಾಜಿ ಸಿಎಂ ಸರ್ಕಾರಕ್ಕೆ ಸಲಹೆ ಮಾಡಿದ್ದಾರೆ. ಉತ್ಪನ್ನಗಳನ್ನು ನಗರ ವಾರ್ಡ್ ಮಟ್ಟದಲ್ಲಿ ವಿತರಣೆ ಮಾಡಲು ವ್ಯವಸ್ಥೆ ಮಾಡಬೇಕು. ರೈತರ ಉತ್ಪನ್ನಗಳನ್ನು ನೇರವಾಗಿ ಸಣ್ಣಪುಟ್ಟ ಅಂಗಡಿಗಳಿಗೆ ತಲುಪಿಸಲು ವ್ಯವಸ್ಥೆಯೊಂದನ್ನು ಸರ್ಕಾರ ಕೂಡಲೇ ಸೃಷ್ಟಿ ಮಾಡಬೇಕು ಎಂದು ಸರಣಿ ಟ್ವೀಟ್ ಮಾಡಿ ಹೇಳಿದ್ದಾರೆ.

ಹಲವು ರೈತರು, ಕೃಷಿ ಉತ್ಪನ್ನ ಮಾರಾಟಗಾರರು ಈಗಾಗಲೆ ತಮ್ಮ ಪರಿಧಿಯಲ್ಲೇ ಸಾಗಾಟ, ವ್ಯಾಪಾರಕ್ಕೆ ವ್ಯವಸ್ಥೆ ಮಾಡಿಕೊಂಡಿದ್ದಾರೆ. ಆದರೆ ಉತ್ಪನ್ನ ಸಾಗಿಸುವಾಗ ತಡೆಯುವ, ಅವರಿಂದ ದುಡ್ಡು ಕೇಳುತ್ತಿರುವ ಕುರಿತು ನನಗೆ ಮಾಹಿತಿ ಇದೆ. ಕೃಷಿ ಉತ್ಪನ್ನಗಳ ಸಾಗಾಟಕ್ಕೆ ಸರ್ಕಾರ ನಿರ್ಬಂಧ ಹೇರಬಾರದು. ಇದು ರೈತರ ಬದುಕಿನ, ಜನರ ಆಹಾರದ ಪ್ರಶ್ನೆಯಾಗಿದೆ ಎಂದಿದ್ದಾರೆ.

ವಿಡಿಯೋ ಸಂವಾದ: ಕೊರೊನಾ ಬಾಧಿತವಾಗಿರುವ ಮೈಸೂರು ಜಿಲ್ಲೆಯ ಸ್ಥಿತಿಗತಿಯ ಕುರಿತು ಮಾಜಿ ಮುಖ್ಯಮಂತ್ರಿ ಎಚ್.ಡಿ ಕುಮಾರಸ್ವಾಮಿ ಜಿಲ್ಲೆಯ ಶಾಸಕರೊಂದಿಗೆ ವಿಡಿಯೋ ಕಾನ್ಪರೆನ್ಸ್ ಮೂಲಕ ರ್ಚಚಿಸಿದರು.

ವಿಡಿಯೋ ಕಾನ್ಪರೆನ್ಸ್​ನಲ್ಲಿ ಮಾಜಿ ಸಚಿವ, ಕೆಆರ್ ನಗರ ಶಾಸಕ ಸಾ.ರಾ ಮಹೇಶ್, ಟಿ. ನರಸೀಪುರ ಶಾಸಕ ಅಶ್ವಿನ್ ಕುಮಾರ್, ಪಿರಿಯಾಪಟ್ಟಣ ಶಾಸಕ ಮಹದೇವು ಪಾಲ್ಗೊಂಡಿದ್ದರು. ಜಿ.ಟಿ. ದೇವೇಗೌಡ ಇರಲಿಲ್ಲ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net