ಶಾಸಕ ಜಿ.ಟಿ.ದೇವೇಗೌಡ ಜೆಡಿಎಸ್‌ನಲ್ಲೇ ಇದ್ದಾರೆ : ಕುಮಾರಸ್ವಾಮಿ

hdk- gtd
Published on


ಮೈಸೂರು: ಶಾಸಕ ಜಿ.ಟಿ.ದೇವೇಗೌಡ ಜೆಡಿಎಸ್‌ನಲ್ಲೇ ಇದ್ದಾರೆ. ಮುಂದೆಯೂ ಇರುತ್ತಾರೆ ಎಂದು ಮಾಜಿ ಮುಖ್ಯಮಂತ್ರಿ ಕುಮಾರಸ್ವಾಮಿ ತಿಳಿಸಿದರು.


ಗುರುವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಜಿ.ಟಿ.ದೇವೇಗೌಡರ ಜತೆ ನಾನು ಇತ್ತೀಚೆಗೆ ಮೂರ್ನಾಲ್ಕು ಬಾರಿ ಮಾತನಾಡಿದ್ದೇನೆ. ಮುಂಬರುವ ಚುನಾವಣೆ ಹಿನ್ನೆಲೆಯಲ್ಲಿ ಚಾಮುಂಡೇಶ್ವರಿ ಕ್ಷೇತ್ರದಿಂದಲೇ ಪಂಚರತ್ನ ಯಾತ್ರೆ ಆರಂಭಿಸುತ್ತೇನೆ.

ಪಂಚರತ್ನ ಯಾತ್ರೆಯಲ್ಲೂ ಜಿ.ಟಿ.ದೇವೇಗೌಡ ಭಾಗಿಯಾಗಲಿದ್ದಾರೆ. ಪಂಚರತ್ನ ಯಾತ್ರೆ ವೇಳೆ ನೂರು ಗ್ರಾಮಗಳಲ್ಲಿ ವಾಸ್ತವ್ಯ ಮಾಡಲಿದ್ದೇನೆ. ಆ ಮೂಲಕ ಜೆಡಿಎಸ್ ಪಕ್ಷವನ್ನು ಅಧಿಕಾರಕ್ಕೆ ತರಲು ಶ್ರಮಿಸುತ್ತೇನೆ ಎಂದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net