ಡಿಕೆಶಿ ಟೀಕಿಸದಿದ್ದರೆ ಎಚ್‌ಡಿಕೆಗೆ ನಿದ್ದೆ ಬರಲ್ಲ

HDK DK
Published on

ಮೈಸೂರು: ಡಿ.ಕೆ.ಶಿವಕುಮಾರ್ ಅವರು ಮುಂದಿನ ದಿನಗಳಲ್ಲಿ ರಾಜ್ಯದ ಮುಖ್ಯಮಂತ್ರಿ ಆಗುತ್ತಾರೆ ಎಂಬ ಅಸೂಯೆಯಿಂದ ಅವರನ್ನು ಕೇಂದ್ರ ಸಚಿವ ಎಚ್.ಡಿ.ಕುಮಾರಸ್ವಾಮಿ ಟೀಕಿಸುತ್ತಿದ್ದಾರೆ ಎಂದು ನಗರ ಕಾಂಗ್ರೆಸ್ ವಕ್ತಾರ ಎಸ್.ರಾಜೇಶ್ ದೂರಿದರು.
ಕುಮಾರಸ್ವಾಮಿ ಅವರು ರಾಜ್ಯಕ್ಕೆ ಬಂದಾಗಲೆಲ್ಲ ಡಿಸಿಎಂ ಡಿ.ಕೆ.ಶಿವಕುಮಾರ್ ಅವರನ್ನು ಟೀಕಿಸದಿದ್ದರೆ ಅವರಿಗೆ ನಿದ್ದೆ ಬರುವುದಿಲ್ಲ ಎನಿಸುತ್ತದೆ ಎಂದು ಸೋಮವಾರ ಸುದ್ದಿಗೋಷ್ಠಿಯಲ್ಲಿ ಲೇವಡಿ ಮಾಡಿದರು.
ಮಾಜಿ ಸಿಎಂ ಬಿ.ಎಸ್.ಯಡಿಯೂರಪ್ಪ ಅವರ ಕುಟುಂಬ ಕೂಡ ಬಿಡಿಎ, ಶಿವಮೊಗ್ಗ ಮೊದಲಾದ ಕಡೆ ನಿವೇಶನಗಳಿಗೆ ಸಂಬಂಧಿಸಿದಂತೆ ಅಕ್ರಮ ಎಸಗಿರುವ ಬಗ್ಗೆ ಆರೋಪಗಳಿವೆ. ಮುಡಾ ಹಗರಣದಲ್ಲಿ ಬಿ.ವೈ.ವಿಜಯೇಂದ್ರ ಅವರ ಪಾತ್ರವೂ ಇದೆ. ಇವರು ತಮ್ಮ ಬೆಂಬಲಿಗರಿಗೆ ಕಾನೂನುಬಾಹಿರವಾಗಿ ಬಹಳಷ್ಟು ನಿವೇಶನ ಕೊಡಿಸಿದ್ದಾರೆ ಎಂಬ ಆರೋಪ ಇದ್ದು, ಈ ಬಗ್ಗೆಯೂ ತನಿಖೆ ನಡೆಯಲೆಂದು ಆಗ್ರಹಿಸಿದರು.
ಸುದ್ದಿಗೋಷ್ಠಿಯಲ್ಲಿ ಮುಖಂಡರಾದ ಸೈಯದ್ ಫಾರೂಕ್, ಶ್ರೀನಿವಾಸ್ ಗೌಡ, ಕುಮಾರ್, ಪ್ರವೀಣ್‌ಕುಮಾರ್, ಮೈಸೂರು ಬಸವಣ್ಣ ಹಾಜರಿದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net