ಸೀತಾಪುರದಲ್ಲಿ ನಾಳೆ ಎಚ್‌ಡಿಕೆ ಭತ್ತ ನಾಟಿ

9-pnp 1
ಪಾಂಡವಪುರ : ಕಳೆದ ಎರಡು ವರ್ಷಗಳಿಂದ ಬರಗಾಲದಿಂದ ಕಂಗೆಟ್ಟಿರುವ ರೈತರಿಗೆ ಆತ್ಮಸ್ಥೈರ್ಯ ತುಂಬಲು ಕೇಂದ್ರ ಸಚಿವ ಎಚ್.ಡಿ.ಕುಮಾರಸ್ವಾಮಿ ಅವರು ಆ.11 ರಂದು ತಾಲೂಕಿನ ಸೀತಾಪುರ ಗ್ರಾಮ ವ್ಯಾಪ್ತಿಯ ಗದ್ದೆಯಲ್ಲಿ ಭತ್ತ ನಾಟಿ ಮಾಡುವ ಮೂಲಕ ರೈತರನ್ನು ಉತ್ತೇಜಿಸಲಿದ್ದಾರೆ ಎಂದು ಮಾಜಿ ಶಾಸಕ ಸಿ.ಎಸ್.ಪುಟ್ಟರಾಜು ಹೇಳಿದರು. ತಾಲೂಕಿನ ಅರಳಕುಪ್ಪೆ ಗ್ರಾಮದ ಲಕ್ಷ್ಮಣ ಎಂಬುವವರ ಮೂರುವರೆ ಎಕರೆ ಜಮೀನಿನಲ್ಲಿ ಭತ್ತ ನಾಟಿ ನಡೆಯಲಿದ್ದು, ಇದರ ಪೂರ್ವ ಸಿದ್ಧತೆಗಳನ್ನು ಶುಕ್ರವಾರ ಪರಿಶೀಲಿಸಿದ ಬಳಿಕ ಅವರು ಮಾತನಾಡಿದರು. ಅಂದು ಬೆಳಗ್ಗೆ 10.30 ಗಂಟೆಗೆ ಕಾವೇರಿ ಮಾತೆ ಹಾಗೂ ಕಟ್ಟೇರಿ ಬಳಿ ಇರುವ ಆಂಜನೇಯಸ್ವಾಮಿ ದೇವಸ್ಥಾನದಲ್ಲಿ ವಿಶೇಷ ಪೂಜೆ ಸಲ್ಲಿಸಿದ ಬಳಿಕ ಕೃಷಿ ಕಾರ್ಮಿಕ ಮಹಿಳೆಯರೊಂದಿಗೆ ಕುಮಾರಸ್ವಾಮಿ ಅವರು ಭತ್ತ ನಾಟಿ ಕಾರ್ಯಕ್ರಮದಲ್ಲಿ ಪಾಲ್ಗೊಳ್ಳಲಿದ್ದಾರೆ. ಇದಕ್ಕೂ ಮೊದಲು ಭತ್ತ ಮತ್ತು ಧಾನ್ಯಗಳ ರಾಶಿಗೆ ಪೂಜೆ ನೆರವೇರಿಸುವರು. 2018ರಲ್ಲೂ ಬರಗಾಲ ಎದುರಾಗಿದ್ದಾಗ ಕುಮಾರಸ್ವಾಮಿ ಅವರು ಭತ್ತ ನಾಟಿ ಮಾಡಿ ರೈತರಿಗೆ ಆತ್ಮಬಲ ತುಂಬಿದರು. ಆದಾದ ಒಂದು ತಿಂಗಳ ಅಂತರದಲ್ಲಿ ವರುಣನ ಕೃಪೆಯಿಂದ ಕೆಆರ್‌ಎಸ್ ಅಣೆಕಟ್ಟೆ ತುಂಬಿ ರೈತರು ನೆಮ್ಮದಿಯ ನಿಟ್ಟುಸಿರು ಬಿಟ್ಟಿದ್ದರು ಎಂದು ವಿವರಿಸಿದರು. ಒತ್ತಡದ ನಡುವೆಯೂ ಗದ್ದೆ ನಾಟಿಗೆ ಚಾಲನೆ ಕೊಡಲು ಒಪ್ಪಿ ಇಲ್ಲಿಗೆ ಬರುತ್ತಿದ್ದಾರೆ. ಗದ್ದೆ ಸಂಪೂರ್ಣ ನಾಟಿ ಕಾರ್ಯಕ್ರಮ ಮುಗಿಯುವವರೆಗೂ ಇಲ್ಲೇ ಇದ್ದು, ಕೃಷಿ ಕಾರ್ಮಿಕರೊಂದಿಗೆ ಊಟ ಸವಿಯಲಿದ್ದಾರೆ ಎಂದರು. ಜೆಡಿಎಸ್ ಯುವ ಘಟಕದ ರಾಜ್ಯಾಧ್ಯಕ್ಷ ನಿಖಿಲ್ ಕುಮಾರಸ್ವಾಮಿ, ಜೆಡಿಎಸ್ ಕೋರ್ ಕಮಿಟಿ ಅಧ್ಯಕ್ಷ ಜಿ.ಟಿ.ದೇವೇಗೌಡ, ಶಾಸಕಾಂಗ ಪಕ್ಷದ ನಾಯಕ ಸುರೇಶ್ ಬಾಬು, ನಾಡಗೌಡ ಹಾಗೂ ಜಿಲ್ಲೆಯ ಹಾಲಿ ಮತ್ತು ಮಾಜಿ ಸಚಿವರು ಮತ್ತು ಶಾಸಕರು ಹಾಗೂ ವಿಧಾನ ಪರಿಷತ್ ಸದಸ್ಯರು ಭಾಗವಹಿಸಲಿದ್ದಾರೆ ಎಂದು ತಿಳಿಸಿದರು. ನಾವೇ ನೀರುಗಂಟಿ ಕೆಲಸ ಮಾಡಬೇಕಾಗುತ್ತದೆ: ವಿಶ್ವೇಶ್ವರಯ್ಯ ನಾಲಾ ಅಚ್ಚಕಟ್ಟು ವ್ಯಾಪ್ತಿಯ ಕೊನೆ ಭಾಗಕ್ಕೆ ನೀರು ತಲುಪುತ್ತಿಲ್ಲ ಎಂಬ ದೂರುಗಳು ಕೇಳಿ ಬರುತ್ತಿದೆ. ಕಾವೇರಿ ನೀರಾವರಿ ನಿಗಮದ ಅಧಿಕಾರಿಗಳ ಜತೆ ಕುಮಾರಸ್ವಾಮಿ ಮಾತನಾಡಿದ್ದಾರೆ. ನಾಲೆಗಳಿಗೆ ನೀರು ಹರಿಸಿ ಕೆರೆಕಟ್ಟೆಗಳನ್ನು ತುಂಬಿಸಬೇಕು ಎಂದು ಸೂಚನೆ ಕೊಟ್ಟಿದ್ದಾರೆ. ಅಧಿಕಾರಿಗಳು ಸಮರ್ಥರಿದ್ದು, ಕೇಂದ್ರ ಸಚಿವರ ಸೂಚನೆಯನ್ನು ಪಾಲಿಸುತ್ತಾರೆ ಎಂಬ ನಂಬಿಕೆ ಇದೆ. ಒಂದು ವೇಳೆ ವಿಫಲರಾದರೆ ಅವರಿಗೆ ಪಾಠ ಕಲಿಸುವ ಜತೆಗೆ ನಾವೇ ನೀರುಗಂಟಿಗಳಾಗಿ ಕೆಲಸ ಮಾಡಬೇಕಾಗುತ್ತದೆ ಎಂದು ಎಚ್ಚರಿಸಿದರು.
Published on

ಪಾಂಡವಪುರ : ಕಳೆದ ಎರಡು ವರ್ಷಗಳಿಂದ ಬರಗಾಲದಿಂದ ಕಂಗೆಟ್ಟಿರುವ ರೈತರಿಗೆ ಆತ್ಮಸ್ಥೈರ್ಯ ತುಂಬಲು ಕೇಂದ್ರ ಸಚಿವ ಎಚ್.ಡಿ.ಕುಮಾರಸ್ವಾಮಿ ಅವರು ಆ.11 ರಂದು ತಾಲೂಕಿನ ಸೀತಾಪುರ ಗ್ರಾಮ ವ್ಯಾಪ್ತಿಯ ಗದ್ದೆಯಲ್ಲಿ ಭತ್ತ ನಾಟಿ ಮಾಡುವ ಮೂಲಕ ರೈತರನ್ನು ಉತ್ತೇಜಿಸಲಿದ್ದಾರೆ ಎಂದು ಮಾಜಿ ಶಾಸಕ ಸಿ.ಎಸ್.ಪುಟ್ಟರಾಜು ಹೇಳಿದರು.

ತಾಲೂಕಿನ ಅರಳಕುಪ್ಪೆ ಗ್ರಾಮದ ಲಕ್ಷ್ಮಣ ಎಂಬುವವರ ಮೂರುವರೆ ಎಕರೆ ಜಮೀನಿನಲ್ಲಿ ಭತ್ತ ನಾಟಿ ನಡೆಯಲಿದ್ದು, ಇದರ ಪೂರ್ವ ಸಿದ್ಧತೆಗಳನ್ನು ಶುಕ್ರವಾರ ಪರಿಶೀಲಿಸಿದ ಬಳಿಕ ಅವರು ಮಾತನಾಡಿದರು.

ಅಂದು ಬೆಳಗ್ಗೆ 10.30 ಗಂಟೆಗೆ ಕಾವೇರಿ ಮಾತೆ ಹಾಗೂ ಕಟ್ಟೇರಿ ಬಳಿ ಇರುವ ಆಂಜನೇಯಸ್ವಾಮಿ ದೇವಸ್ಥಾನದಲ್ಲಿ ವಿಶೇಷ ಪೂಜೆ ಸಲ್ಲಿಸಿದ ಬಳಿಕ ಕೃಷಿ ಕಾರ್ಮಿಕ ಮಹಿಳೆಯರೊಂದಿಗೆ ಕುಮಾರಸ್ವಾಮಿ ಅವರು ಭತ್ತ ನಾಟಿ ಕಾರ್ಯಕ್ರಮದಲ್ಲಿ ಪಾಲ್ಗೊಳ್ಳಲಿದ್ದಾರೆ. ಇದಕ್ಕೂ ಮೊದಲು ಭತ್ತ ಮತ್ತು ಧಾನ್ಯಗಳ ರಾಶಿಗೆ ಪೂಜೆ ನೆರವೇರಿಸುವರು. 2018ರಲ್ಲೂ ಬರಗಾಲ ಎದುರಾಗಿದ್ದಾಗ ಕುಮಾರಸ್ವಾಮಿ ಅವರು ಭತ್ತ ನಾಟಿ ಮಾಡಿ ರೈತರಿಗೆ ಆತ್ಮಬಲ ತುಂಬಿದರು. ಆದಾದ ಒಂದು ತಿಂಗಳ ಅಂತರದಲ್ಲಿ ವರುಣನ ಕೃಪೆಯಿಂದ ಕೆಆರ್‌ಎಸ್ ಅಣೆಕಟ್ಟೆ ತುಂಬಿ ರೈತರು ನೆಮ್ಮದಿಯ ನಿಟ್ಟುಸಿರು ಬಿಟ್ಟಿದ್ದರು ಎಂದು ವಿವರಿಸಿದರು.

ಒತ್ತಡದ ನಡುವೆಯೂ ಗದ್ದೆ ನಾಟಿಗೆ ಚಾಲನೆ ಕೊಡಲು ಒಪ್ಪಿ ಇಲ್ಲಿಗೆ ಬರುತ್ತಿದ್ದಾರೆ. ಗದ್ದೆ ಸಂಪೂರ್ಣ ನಾಟಿ ಕಾರ್ಯಕ್ರಮ ಮುಗಿಯುವವರೆಗೂ ಇಲ್ಲೇ ಇದ್ದು, ಕೃಷಿ ಕಾರ್ಮಿಕರೊಂದಿಗೆ ಊಟ ಸವಿಯಲಿದ್ದಾರೆ ಎಂದರು.

ಜೆಡಿಎಸ್ ಯುವ ಘಟಕದ ರಾಜ್ಯಾಧ್ಯಕ್ಷ ನಿಖಿಲ್ ಕುಮಾರಸ್ವಾಮಿ, ಜೆಡಿಎಸ್ ಕೋರ್ ಕಮಿಟಿ ಅಧ್ಯಕ್ಷ ಜಿ.ಟಿ.ದೇವೇಗೌಡ, ಶಾಸಕಾಂಗ ಪಕ್ಷದ ನಾಯಕ ಸುರೇಶ್ ಬಾಬು, ನಾಡಗೌಡ ಹಾಗೂ ಜಿಲ್ಲೆಯ ಹಾಲಿ ಮತ್ತು ಮಾಜಿ ಸಚಿವರು ಮತ್ತು ಶಾಸಕರು ಹಾಗೂ ವಿಧಾನ ಪರಿಷತ್ ಸದಸ್ಯರು ಭಾಗವಹಿಸಲಿದ್ದಾರೆ ಎಂದು ತಿಳಿಸಿದರು.

ನಾವೇ ನೀರುಗಂಟಿ ಕೆಲಸ ಮಾಡಬೇಕಾಗುತ್ತದೆ: ವಿಶ್ವೇಶ್ವರಯ್ಯ ನಾಲಾ ಅಚ್ಚಕಟ್ಟು ವ್ಯಾಪ್ತಿಯ ಕೊನೆ ಭಾಗಕ್ಕೆ ನೀರು ತಲುಪುತ್ತಿಲ್ಲ ಎಂಬ ದೂರುಗಳು ಕೇಳಿ ಬರುತ್ತಿದೆ. ಕಾವೇರಿ ನೀರಾವರಿ ನಿಗಮದ ಅಧಿಕಾರಿಗಳ ಜತೆ ಕುಮಾರಸ್ವಾಮಿ ಮಾತನಾಡಿದ್ದಾರೆ. ನಾಲೆಗಳಿಗೆ ನೀರು ಹರಿಸಿ ಕೆರೆಕಟ್ಟೆಗಳನ್ನು ತುಂಬಿಸಬೇಕು ಎಂದು ಸೂಚನೆ ಕೊಟ್ಟಿದ್ದಾರೆ. ಅಧಿಕಾರಿಗಳು ಸಮರ್ಥರಿದ್ದು, ಕೇಂದ್ರ ಸಚಿವರ ಸೂಚನೆಯನ್ನು ಪಾಲಿಸುತ್ತಾರೆ ಎಂಬ ನಂಬಿಕೆ ಇದೆ. ಒಂದು ವೇಳೆ ವಿಫಲರಾದರೆ ಅವರಿಗೆ ಪಾಠ ಕಲಿಸುವ ಜತೆಗೆ ನಾವೇ ನೀರುಗಂಟಿಗಳಾಗಿ ಕೆಲಸ ಮಾಡಬೇಕಾಗುತ್ತದೆ ಎಂದು ಎಚ್ಚರಿಸಿದರು.

ಅರಳಕುಪ್ಪೆ ಗ್ರಾಪಂ ಮಾಜಿ ಅಧ್ಯಕ್ಷ ಮಹದೇವು, ಮಿಥುನ್, ಡಿಸಿಸಿ ಬ್ಯಾಂಕ್ ನಿರ್ದೇಶಕ ಚಲುವರಾಜು, ವಿ.ಎಸ್.ನಿಂಗೇಗೌಡ, ಲಕ್ಷ್ಮಣ, ವಿಶ್ವನಾಥ್, ಕುಳ್ಳೇಗೌಡ, ಇಂದ್ರೇಶ್, ಬೈರವ, ದಯಾಶಂಕರ್ ಇತರರು ಇದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net