HDK Special Puja to Kalabhairava

ನಾಗಮಂಗಲ ತಾಲೂಕಿನ ಆದಿಚುಂಚನಗಿರಿ ಮಹಸಂಸ್ಥಾನ ಮಠಕ್ಕೆ ಭಾನುವಾರ ಭೇಟಿ ಕೊಟ್ಟು ಶ್ರೀ ಕಾಲಭೈರವೇಶ್ವರಸ್ವಾಮಿಗೆ ವಿಶೇಷ ಪೂಜೆ ಸಲ್ಲಿಸಿದ ಮಾಜಿ ಸಿಎಂ ಎಚ್.ಡಿ.ಕುಮಾರಸ್ವಾಮಿ ಅವರನ್ನು ಮಠದ ಪೀಠಾಧ್ಯಕ್ಷ ಡಾ. ನಿರ್ಮಲಾನಂದನಾಥ ಸ್ವಾಮೀಜಿ ಗೌರವಿಸಿದರು..
ನಾಗಮಂಗಲ ತಾಲೂಕಿನ ಆದಿಚುಂಚನಗಿರಿ ಮಹಸಂಸ್ಥಾನ ಮಠಕ್ಕೆ ಭಾನುವಾರ ಭೇಟಿ ಕೊಟ್ಟು ಶ್ರೀ ಕಾಲಭೈರವೇಶ್ವರಸ್ವಾಮಿಗೆ ವಿಶೇಷ ಪೂಜೆ ಸಲ್ಲಿಸಿದ ಮಾಜಿ ಸಿಎಂ ಎಚ್.ಡಿ.ಕುಮಾರಸ್ವಾಮಿ ಅವರನ್ನು ಮಠದ ಪೀಠಾಧ್ಯಕ್ಷ ಡಾ. ನಿರ್ಮಲಾನಂದನಾಥ ಸ್ವಾಮೀಜಿ ಗೌರವಿಸಿದರು..
Published on

ನಾಗಮಂಗಲ: ತಾಲೂಕಿನ ಆದಿಚುಂಚನಗಿರಿ ಮಹಸಂಸ್ಥಾನ ಮಠಕ್ಕೆ ಮಾಜಿ ಮುಖ್ಯಮಂತ್ರಿ ಹಾಗೂ ಲೋಕಸಭಾ ಚುನಾವಣೆಯ ಮೈತ್ರಿ ಅಭ್ಯರ್ಥಿ ಎಚ್.ಡಿ.ಕುಮಾರಸ್ವಾಮಿ ಭಾನುವಾರ ಭೇಟಿ ನೀಡಿ ಕ್ಷೇತ್ರಾಧಿದೇವತೆಗಳಿಗೆ ವಿಶೇಷ ಪೂಜೆ ಸಲ್ಲಿಸಿದ ಬಳಿಕ ಮಠದ ಪೀಠಾಧ್ಯಕ್ಷ ಡಾ. ಶ್ರೀ ನಿರ್ಮಲಾನಂದನಾಥ ಸ್ವಾಮೀಜಿ ಜತೆ ಕೆಲ ಕಾಲ ಚರ್ಚಿಸಿ ಆಶೀರ್ವಾದ ಪಡೆದುಕೊಂಡರು.

ಮಠಕ್ಕೆ ಆಗಮಿಸಿದ ಎಚ್.ಡಿ.ಕುಮಾರಸ್ವಾಮಿ ಅವರಿಗೆ ಮಠದ ವತಿಯಿಂದ ಮಂಗಳವಾದ್ಯ ಮತ್ತು ಪೂರ್ಣಕುಂಭ ಸ್ವಾಗತ ಕೋರಿ ಬರಮಾಡಿಕೊಳ್ಳಲಾಯಿತು. ಈ ವೇಳೆ ಮಠದ ಪೀಠಾಧ್ಯಕ್ಷ ಡಾ.ನಿರ್ಮಲಾನಂದನಾಥ ಶ್ರೀಗಳು, ಕ್ಷೇತ್ರಪಾಲಕ ಶ್ರೀ ಕಾಲಭೈರವೇಶ್ವರಸ್ವಾಮಿ ದೇವಸ್ಥಾನದಲ್ಲಿ ವಿಶೇಷ ಪೂಜಾ ಕೈಂಕರ್ಯ ನೆರವೇರಿಸಿದರು. ದೇವರ ದರ್ಶನದ ಬಳಿಕ ಭೈರವೈಕ್ಯ ಡಾ.ಬಾಲಗಂಗಾಧರನಾಥ ಶ್ರೀಗಳ ಮಹಾ ಗದ್ದುಗೆಗೆ ನಮಸ್ಕರಿಸಿ ಆಶೀರ್ವಾದ ಪಡೆದರು. ನಂತರ ಮಠದ ಪೀಠಾಧ್ಯಕ್ಷ ಡಾ.ನಿರ್ಮಲಾನಂದನಾಥ ಶ್ರೀಗಳೊಂದಿಗೆ ಕೆಲ ಹೊತ್ತು ಮಾತುಕತೆ ನಡೆಸಿದ ಎಚ್‌ಡಿಕೆ ಶ್ರೀಮಠದಲ್ಲಿಯೇ ಬೆಳಗಿನ ಉಪಹಾರ ಸೇವಿಸಿದರು.

ಈ ವೇಳೆ ಶ್ರೀಮಠದ ಸಂಪ್ರದಾಯದಂತೆ ಎಚ್‌ಡಿಕೆ ಅವರಿಗೆ ಶಾಲು ಹೊದಿಸಿ, ಏಲಕ್ಕಿ ಹಾರ ಹಾಕಿ ಹಣ್ಣಿನ ಬುಟ್ಟಿ ಮತ್ತು ನೆನಪಿನ ಕಾಣಿಕೆ ನೀಡಿ ಗೌರವಿಸಲಾಯಿತು. ಆದಿಚುಂಚನಗಿರಿ ಮಠದ ಪ್ರಧಾನ ಕಾರ್ಯದರ್ಶಿ ಪ್ರಸನ್ನನಾಥ ಸ್ವಾಮೀಜಿ, ಚೈತನ್ಯನಾಥ ಸ್ವಾಮೀಜಿ, ಮಾಜಿ ಶಾಸಕ ಸುರೇಶ್ ಗೌಡ, ಮನ್ ಮುಲ್ ಮಾಜಿ ಅಧ್ಯಕ್ಷ ರಾಮಚಂದ್ರು, ರಾಜ್ಯ ಒಕ್ಕಲಿಗರ ಸಂಘದ ನಿರ್ದೇಶಕ ನೆಲ್ಲಿಗೆರೆ ಬಾಲು, ಮತ್ತಿತರರಿದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net