ಪಾಲಿಕೆ ಬಜೆಟ್ ಅಭಿಪ್ರಾಯ ಸಂಗ್ರಹ ಸಭೆ

hdmc photo
Published on

ಹುಬ್ಬಳ್ಳಿ:ಹುಬ್ಬಳ್ಳಿ-ಧಾರವಾಡ ಮಹಾನಗರ ಪಾಲಿಕೆಯ 2024-25ನೇ ಸಾಲಿನ ಬಜೆಟ್ ಸಿದ್ಧಪಡಿಸುವ ಕುರಿತು ಜ. 24 ಮತ್ತು 25ರಂದು ಸಾರ್ವಜನಿಕ ಸಭೆ ಕರೆಯಲಾಗಿದೆ.

24ರಂದು ಬೆಳಗ್ಗೆ 11 ಗಂಟೆಗೆ ಇಲ್ಲಿಯ ಪಾಲಿಕೆ ಆಯುಕ್ತರ ಕಚೇರಿ ಸಭಾಭವನದಲ್ಲಿ ಹುಬ್ಬಳ್ಳಿ ನಗರ ವ್ಯಾಪ್ತಿಯ ಸಾರ್ವಜನಿಕರು ಹಾಗೂ 25ರಂದು ಬೆಳಗ್ಗೆ 11 ಗಂಟೆಗೆ ಧಾರವಾಡದಲ್ಲಿನ ಪಾಲಿಕೆ ಆಡಳಿತ ಕಚೇರಿ ಸಭಾಭವನದಲ್ಲಿ ಧಾರವಾಡ ನಗರ ವ್ಯಾಪ್ತಿಯ ಸಾರ್ವಜನಿಕರು ಸಭೆಯಲ್ಲಿ ಪಾಲ್ಗೊಳ್ಳಬಹುದಾಗಿದೆ.

ಪಾಲಿಕೆಯ ಅದಾಯ ಹೆಚ್ಚಿಸುವ ಹಾಗೂ ನಾಗರಿಕರಿಗೆ ಅತೀ ಅವಶ್ಯಕ ಸೇವೆಗಳನ್ನು ಒದಗಿಸಲು ಅನುಕೂಲವಾಗುವಂತೆ ಸಾರ್ವಜನಿಕರು ಮತ್ತು ವಿವಿಧ ಸಂಘ ಸಂಸ್ಥೆಗಳಿಂದ ಅಗತ್ಯ ಸಲಹೆ, ಅಭಿಪ್ರಾಯ ಮತ್ತು ಮನವಿಗಳನ್ನು ಸ್ವಿಕರಿಸಲಾಗುವುದು. ಲಭ್ಯವಾಗುವ ಅನುದಾನಕ್ಕೆ ಅನುಗುಣವಾಗಿ ಬಜೆಟ್ ರೂಪಿಸಲಾಗುವುದು ಎಂದು ಪಾಲಿಕೆ ತಿಳಿಸಿದೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net