ಪಾಲಿಕೆ ಸಾಮಾನ್ಯ ಸಭೆ 29ರಂದು

hdmc photo
Published on

ಹುಬ್ಬಳ್ಳಿ: ಹು-ಧಾ ಮಹಾನಗರ ಪಾಲಿಕೆಯ ಸಾಮಾನ್ಯ ಸಭೆ ಏ. 29ರಂದು ಬೆಳಗ್ಗೆ 11ಗಂಟೆಗೆ ಇಲ್ಲಿಯ ಪಾಲಿಕೆಯ ಸಭಾಭವನದಲ್ಲಿ ನಡೆಯಲಿದೆ ಎಂದು ಪಾಲಿಕೆ ಆಯುಕ್ತ ಡಾ. ರುದ್ರೇಶ ಘಾಳಿ ತಿಳಿಸಿದ್ದಾರೆ.

ಪಾಲಿಕೆಯ ಆಸ್ತಿ ಸಂರಕ್ಷಣೆ ಹಾಗೂ ಭದ್ರತೆ ದೃಷ್ಟಿಯಿಂದ ಹೊರಗುತ್ತಿಗೆ ಮೇಲೆ 64 ಕಾವಲುಗಾರರ ನೇಮಕ, ಧಾರವಾಡ ನಗರದ 170 ಕೋಟಿ ರೂ. ವೆಚ್ಚದ ಒಳಚರಂಡಿ ಕಾಮಗಾರಿಯ ಅಂದಾಜು ಪಟ್ಟಿ ಅನುಮೋದನೆ, ಇನ್ನಿತರ ವಿಷಯಗಳು ಚರ್ಚೆಯಾಗಲಿವೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net