

ವಿಜಯವಾಣಿ ಸುದ್ದಿಜಾಲ ಹುಬ್ಬಳ್ಳಿ: ನಿಷೇಧಿತ ಪ್ಲಾಸ್ಟಿಕ್ ಮಾರಾಟ ಮಳಿಗೆಯ ಮೇಲೆ ಹುಬ್ಬಳ್ಳಿ-ಧಾರವಾಡ ಮಹಾನಗರ ಪಾಲಿಕೆಯ ಅಧಿಕಾರಿಗಳು ಗುರುವಾರ ಕಾರ್ಯಾಚರಣೆ ನಡೆಸಿದ್ದಾರೆ.
ಬಂಕಾಪುರ ಚೌಕದ ಶ್ರೀಕುಮಾರ್ ಲಾಜಿಸ್ಟಿಕ್ಸ್ ಇಂಡಿಯಾ ಪ್ರೖೆವೇಟ್ ಲಿಮಿಟೆಡ್ ಮೇಲೆ ದಾಳಿ ನಡೆಸಿ 1,225 ಕೆಜಿ ಯಷ್ಟು ನಿಷೇಧಿತ ಕ್ಯಾರಿ ಬ್ಯಾಗ್ ಹಾಗೂ ಪ್ಲಾಸ್ಟಿಕ್ ವಸ್ತುಗಳನ್ನು ವಶಕ್ಕೆ ಪಡೆದು, ಮಳಿಗೆಯ ಮಾಲೀಕನಿಗೆ 40 ಸಾವಿರ ರೂ. ದಂಡ ವಿಧಿಸಿದ್ದಾರೆ.
ಕಾರ್ಯಾಚರಣೆ ವೇಳೆ ಪಾಲಿಕೆಯ ಆರೋಗ್ಯ ನಿರೀಕ್ಷಕ ನೂರಂದಪ್ಪ ಭಜಂತ್ರಿ, ದೀಪಿಕಾ ಆರ್., ಬುಡ್ಡಪ್ಪ ಮೊರಬದ, ಮಂಜುನಾಥ ಕೆಂಪಣ್ಣವರ, ಪೌರ ಕಾರ್ವಿುಕರು ಇದ್ದರು.