

ಹುಬ್ಬಳ್ಳಿ: ಹುಬ್ಬಳ್ಳಿ-ಧಾರವಾಡ ಮಹಾನಗರ ಪಾಲಿಕೆಯ ವಿವಿಧ ಆಸ್ಪತ್ರೆಗಳಿಗೆ ವೈದ್ಯರು ಮತ್ತು ಅರೆ ವೈದ್ಯಕೀಯ ಸಿಬ್ಬಂದಿ ನೇಮಕಾತಿ ಪ್ರಕ್ರಿಯೆಯನ್ನು ತಾತ್ಕಾಲಿಕವಾಗಿ ಹಿಂತೆಗೆದುಕೊಳ್ಳಲಾಗಿದೆ.
ಸರ್ಕಾರದ ಅಧಿಕೃತ ಟಿಪ್ಪಣಿ ಅನುಸಾರ ಮೌಲ್ಯಮಾಪನ ಸಮಿತಿ ಸದಸ್ಯರು ರ್ಚಚಿಸಿರುವಂತೆ ಮತ್ತೊಮ್ಮೆ ಸರ್ಕಾರದ ಸುತ್ತೋಲೆ, ಆದೇಶ, ಟಿಪ್ಪಣೆಗಳನ್ನು ಪರಿಶೀಲಿಸಿ ಹೊಸದಾಗಿ ನೇಮಕಾತಿ ಪ್ರಕಟಣೆ ಮಾಡಿ ನೇಮಕಾತಿ ಪ್ರಕ್ರಿಯೆಯನ್ನು ಕೈಗೊಳ್ಳಬೇಕೆಂಬ ಅಭಿಪ್ರಾಯ ವ್ಯಕ್ತಪಡಿಸಿರುವ ಹಿನ್ನಲೆಯಲ್ಲಿ ಪಾಲಿಕೆಯ ವಿವಿಧ ಆಸ್ಪತ್ರೆಗಳಿಗೆ ತಾತ್ಕಾಲಿಕವಾಗಿ ವೈದ್ಯರು ಮತ್ತು ಆರೆ ವೈದ್ಯಕೀಯ ಸಿಬ್ಬಂದಿ ನೇಮಕಾತಿ ಮಾಡುವ ಪ್ರಕ್ರಿಯೆಯನ್ನು ತಾತ್ಕಾಲಿಕವಾಗಿ ಕೈಬಿಡಲಾಗಿದೆ ಎಂದು ಪಾಲಿಕೆಯ ಆಯುಕ್ತ ಡಾ. ಈಶ್ವರ ಉಳ್ಳಾಗಡ್ಡಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.