ಪಾಲಿಕೆಗೆ ರಾಷ್ಟ್ರ ಮಟ್ಟದ ಪ್ರಶಸ್ತಿ

hdmc photo
Published on

ವಿಜಯವಾಣಿ ಸುದ್ದಿಜಾಲ ಹುಬ್ಬಳ್ಳಿ: ಪಿಎಂ ಸ್ವ-ನಿಧಿ ಯೋಜನೆಯಡಿ ಸಾಲ ನೀಡಿಕೆಯಲ್ಲಿ ಉತ್ತಮ ಸಾಧನೆಗಾಗಿ ಕೇಂದ್ರ ಸರ್ಕಾರದ ವಸತಿ ಮತ್ತು ನಗರ ವ್ಯವಹಾರಗಳ ಸಚಿವಾಲಯವು ಹುಬ್ಬಳ್ಳಿ-ಧಾರವಾಡ ಮಹಾನಗರ ಪಾಲಿಕೆಯನ್ನು ರಾಷ್ಟ್ರ ಮಟ್ಟದ ಪ್ರಶಸ್ತಿಗೆ ಆಯ್ಕೆ ಮಾಡಿದೆ.

ಆ. 22ರಂದು ಬೆಳಗ್ಗೆ 10 ಗಂಟೆಗೆ ಬೆಂಗಳೂರಿನ ವಿಕಾಸ ಸೌಧದಲ್ಲಿ ಪ್ರಶಸ್ತಿ ಪ್ರಧಾನ ಸಮಾರಂಭ ಆಯೋಜಿಸಲಾಗಿದೆ. ಪ್ರಶಸ್ತಿ ಪಡೆಯುವಲ್ಲಿ ಶ್ರಮಿಸಿದ ಪಾಲಿಕೆಯ ಸಮುದಾಯ ವ್ಯವಹಾರಗಳ ಅಧಿಕಾರಿ ರಮೇಶ ನೂಲ್ವಿ, ಸಿಬ್ಬಂದಿ ಅರವಿಂದ ಜಮಖಂಡಿ, ಸರೋಜಾ ಪೂಜಾರ್, ಪ್ರಭಾಕರ ದೊಡ್ಡಮನಿ, ಶಾರದ ಅಂಗಡಿ, ವಿದ್ಯಾ ತೇಲಗರ, ವಿಜಯಲಕ್ಷ್ಮಿ ಗುಡ್ಡಿನ, ಅಬ್ದುಲ್ ರಜಾಕ್, ದೇವೇಂದ್ರ ಕುರ್ತಕೋಟಿ, ಬಸಯ್ಯ ಹಿರೇಮಠ, ಅನಿತಾ ತೋಡ್ಕರ ಅವರ ಬಗ್ಗೆ ಮೇಯರ್ ರಾಮಪ್ಪ ಬಡಿಗೇರ ಹಾಗೂ ಪಾಲಿಕೆ ಆಯುಕ್ತ ಡಾ. ಈಶ್ವರ ಉಳ್ಳಾಗಡ್ಡಿ ಪ್ರಶಂಸೆ ವ್ಯಕ್ತಪಡಿಸಿದ್ದಾರೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net