ಸ್ನೇಹಿತನಿಗೆ ಚಾಕು ಇರಿದು ಠಾಣೆಗೆ ಬಂದ

Crime Logo
Published on

ಕಲಘಟಗಿ: ವ್ಯಕ್ತಿಯೊಬ್ಬ ಕುಡಿದ ಮತ್ತಿನಲ್ಲಿ ತನ್ನ ಸ್ನೇಹಿತನಿಗೆ ಚಾಕುವಿನಿಂದ ಇರಿದ ಘಟನೆ ತಾಲೂಕಿನ ಮಿಶ್ರಿಕೋಟಿ ಗ್ರಾಮದ ಹೊರವಲಯದಲ್ಲಿ ಭಾನುವಾರ ರಾತ್ರಿ ನಡೆದಿದೆ.

ಹುಬ್ಬಳ್ಳಿ ತಾಲೂಕಿನ ಚನ್ನಾಪುರ ಗ್ರಾಮದ ಯುವರಾಜ ಕರಮಡಿ ಎಂಬಾತನೇ ಚಾಕು ಇರಿದವ. ಈತ ತನ್ನ ಸ್ನೇಹಿತ ಪರಶುರಾಮ ಹರಿಜನ ಎಂಬಾತನಿಗೆ ಭಾನುವಾರ ರಾತ್ರಿ ವೇಳೆ ಕ್ಷುಲ್ಲಕ ಕಾರಣಕ್ಕೆ ಚಾಕುವಿನಿಂದ ಇರಿದಿದ್ದಾನೆ. ನಂತರ ಹಳೇಹುಬ್ಬಳ್ಳಿ ಪೊಲೀಸ್ ಠಾಣೆಗೆ ಶರಣಾಗಲು ಹೋಗಿದ್ದಾನೆ. ಹುಬ್ಬಳ್ಳಿ ಪೊಲೀಸರು ನೀಡಿದ ಮಾಹಿತಿಯಂತೆ ಕಲಘಟಗಿ ಠಾಣೆ ಪೊಲೀಸರು ಸ್ಥಳಕ್ಕೆ ಆಗಮಿಸಿ, ಆರೋಪಿ ಯುವರಾಜನನ್ನು ವಶಕ್ಕೆ ಪಡೆದರು. ಘಟನಾ ಸ್ಥಳಕ್ಕೆ ಪೊಲೀಸರು ತೆರಳಿ, ತೀವ್ರ ರಕ್ತಸ್ರಾವದಿಂದ ಬಳಲುತ್ತಿದ್ದ ಗಾಯಾಳು ಪರಶುರಾಮನನ್ನು ಹುಬ್ಬಳ್ಳಿ ಕಿಮ್ಸ್‌ಗೆ ದಾಖಲಿಸಿದ್ದು, ಪ್ರಾಣಾಪಾಯದಿಂದ ಪಾರಾಗಿದ್ದಾನೆ. ಈ ಕುರಿತು ಕಲಘಟಗಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net